ಮಾದಕ ವಸ್ತುಗಳ ಬಳಕೆಯಿಂದ ಯುವಜನತೆಯ ಭವಿಷ್ಯ ನಾಶ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಕಳವಳ
ಮೈಸೂರು, 27 ಜುಲೈ (ಹಿ.ಸ.): ಆ್ಯಂಕರ್: ಯುವ ಸಮುದಾಯವನ್ನು ಮಾರಕ ವ್ಯಸನಗಳಿಂದ ದೂರವಿಡುವ ಉದ್ದೇಶದಿಂದ ಮೈಸೂರು ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಟೆರೇಸಿಯನ್ ಕಾಲೇಜು ಎನ್.ಎಸ್.ಎಸ್ ಘಟಕದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ’ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸ
DrYatheendraSiddaramaiah


ಮೈಸೂರು, 27 ಜುಲೈ (ಹಿ.ಸ.):

ಆ್ಯಂಕರ್:

ಯುವ ಸಮುದಾಯವನ್ನು ಮಾರಕ ವ್ಯಸನಗಳಿಂದ ದೂರವಿಡುವ ಉದ್ದೇಶದಿಂದ ಮೈಸೂರು ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಟೆರೇಸಿಯನ್ ಕಾಲೇಜು ಎನ್.ಎಸ್.ಎಸ್ ಘಟಕದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ’ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದರು.

ಮೈಸೂರು ನಗರದ ಟೆರೇಸಿಯನ್ ಕಾಲೇಜು ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಹಾಗೂ ಇತರೆ ಮಾದಕ ವಸ್ತುಗಳ ವ್ಯಸನಕ್ಕೆ ಯುವ ಜನತೆ ಬಲಿಯಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಮಾದಕ ವಸ್ತುಗಳು ಕೇವಲ ವ್ಯಕ್ತಿಯ ಆರೋಗ್ಯವನ್ನು ಮಾತ್ರವಲ್ಲದೆ, ಇಡೀ ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುತ್ತವೆ ಎಂದ ಅವರು, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಇಂತಹ ಕೆಟ್ಟ ಚಟಗಳಿಗೆ ಬಲಿಯಾಗದೆ, ತಮ್ಮ ಉಜ್ವಲ ಭವಿಷ್ಯ ಹಾಗೂ ದೇಶದ ನಿರ್ಮಾಣದತ್ತ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಎನ್.ಆರ್. ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಮೈಸೂರು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಲ್ಲಿಕಾರ್ಜುನ ಬಾಲದಂಡಿ, ಕಾಲೇಜಿನ ವ್ಯವಸ್ಥಾಪಕರಾದ ರೆವರೆಂಡ್ ಸಿಸ್ಟರ್ ಅಂಜಲಿ, ನಿರ್ದೇಶಕರಾದ ರೆವರೆಂಡ್ ಡಾ. ಸಿಸ್ಟರ್ ಪ್ರಫುಲ್ಲಾ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ನೂರಾರು ಎನ್.ಎಸ್.ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande