
ಮಂಡ್ಯ, 27 ಜುಲೈ (ಹಿ.ಸ.):
ಆ್ಯಂಕರ್:
ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಹಾಗೂ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಅವರು ನಿವೃತ್ತಿ ಘೋಷಿಸಬಾರದು ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ಆಗ್ರಹಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಂತಹ ಅನುಭವಿ ನಾಯಕರ ಅವಶ್ಯಕತೆ ರಾಜ್ಯಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೂ ಬಹಳಷ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅವರು ಯಾವ ಸಂದರ್ಭದಲ್ಲಿ ಮತ್ತು ಯಾವ ಕಾರಣಕ್ಕಾಗಿ ಈ ರೀತಿ ಹೇಳಿದ್ದಾರೆ ಎಂಬುದು ನಮಗೆ ಸಂಪೂರ್ಣವಾಗಿ ತಿಳಿದಿಲ್ಲ. ಆದರೆ, ಅವರು ಯಾವುದೇ ಕಾರಣಕ್ಕೂ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯಬಾರದು, ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಬೇಕು ಎಂದು ಮನವಿ ಮಾಡಿದರು.
ಇಂದಿನ ರಾಜಕೀಯ ವ್ಯವಸ್ಥೆ ಕಲುಷಿತವಾಗಿ ಬಹಳ ವರ್ಷಗಳೇ ಕಳೆದಿವೆ ಎಂಬುದನ್ನು ಒಪ್ಪಿಕೊಂಡ ಶಾಸಕರು, ಜನರ ಅಪಾರ ನಿರೀಕ್ಷೆಗಳು ಮತ್ತು ಇಂದಿನ ವ್ಯವಸ್ಥೆಯ ಲೋಪಗಳನ್ನು ಗಮನದಲ್ಲಿಟ್ಟುಕೊಂಡು ಅವರು ಆ ಮಾತನ್ನು ಆಡಿರಬಹುದು ಎಂದರು. ಏನೇ ಆಗಲಿ, ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲೂ ಅವರ ನೇತೃತ್ವ ಹಾಗೂ ಉಪಸ್ಥಿತಿ ಅತ್ಯಂತ ಮುಖ್ಯ ಎಂಬುದು ನಮ್ಮೆಲ್ಲರ ಬಲವಾದ ಆಸೆ. ಈ ಕುರಿತು ಶೀಘ್ರದಲ್ಲೇ ಅವರೊಂದಿಗೆ ಖುದ್ದಾಗಿ ಮಾತನಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII