
ನವದೆಹಲಿ, 27 ಜುಲೈ (ಹಿ.ಸ.):
ಆ್ಯಂಕರ್:
ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಸತತ ಮೂರನೇ ಬಾರಿಗೆ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಮೀರಾಬಾಯಿ ಚಾನು ಹಾಗೂ ಭಾರತದ ಪರ ಮೊದಲ ಬೆಳ್ಳಿ ಪದಕ ಗೆದ್ದು ಕಾಮನ್‌ವೆಲ್ತ್ ದಾಖಲೆ ನಿರ್ಮಿಸಿದ ರಿಷಿಕಾಂತ ಸಿಂಗ್ ಚನಂಬಂ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಇಬ್ಬರು ಕ್ರೀಡಾಪಟುಗಳ ಸಾಧನೆ ಇಡೀ ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದು, ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿಯೂ ಭಾರತದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಅನೇಕ ಸಾಧನೆಗಳು ಇವರಿಂದ ಮೂಡಿಬರಲಿ ಎಂದು ಖರ್ಗೆ ಶುಭ ಹಾರೈಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.