ಮೈಸೂರು ದಸರಾ: ಸಿದ್ಧತೆಗಳ ಕುರಿತು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪೂರ್ವ ಭಾವಿ ಸಭೆ
ಮೈಸೂರು, 27 ಜುಲೈ (ಹಿ.ಸ.): ಆ್ಯಂಕರ್: ವಿಶ್ವವಿಖ್ಯಾತ ‘ಮೈಸೂರು ದಸರಾ ಮಹೋತ್ಸವ-2026’ರ ಯಶಸ್ವಿ ಆಚರಣೆ ಹಾಗೂ ಸಿದ್ಧತೆಗಳ ಕುರಿತು ಮೈಸೂರು ಜಿಲ್ಲಾ ಪಂಚಾಯತ್ನ ಡಿ. ದೇವರಾಜ ಅರಸು ಸಭಾಂಗಣದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪೂರ್ವಭಾವಿ ಸಭೆಯನ್ನು ನಡೆಸಿದರು. ಸಭೆಯ
DrYatheendraSiddaramaiah


ಮೈಸೂರು, 27 ಜುಲೈ (ಹಿ.ಸ.):

ಆ್ಯಂಕರ್:

ವಿಶ್ವವಿಖ್ಯಾತ ‘ಮೈಸೂರು ದಸರಾ ಮಹೋತ್ಸವ-2026’ರ ಯಶಸ್ವಿ ಆಚರಣೆ ಹಾಗೂ ಸಿದ್ಧತೆಗಳ ಕುರಿತು ಮೈಸೂರು ಜಿಲ್ಲಾ ಪಂಚಾಯತ್ನ ಡಿ. ದೇವರಾಜ ಅರಸು ಸಭಾಂಗಣದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪೂರ್ವಭಾವಿ ಸಭೆಯನ್ನು ನಡೆಸಿದರು.

ಸಭೆಯಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದು, ಎಲ್ಲರೊಂದಿಗೆ ಸಮಾಲೋಚನೆ ನಡೆಸಿ ದಸರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಹಲವು ಸಲಹೆಗಳನ್ನು ಪಡೆದಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುವ ಈ ಐತಿಹಾಸಿಕ ನಾಡಹಬ್ಬವನ್ನು ಅಚ್ಚುಕಟ್ಟಾಗಿ ಸಂಘಟಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚೆ ನಡೆಸಲಾಯಿತು.

ಈ ಸಭೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳಾದ ಶಾಸಕರು, ಎಂಎಲ್ಸಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ದಸರಾ ಮಹೋತ್ಸವದ ಯಶಸ್ಸಿಗೆ ಅಗತ್ಯವಿರುವ ಸಹಕಾರ ಹಾಗೂ ಸಿದ್ಧತೆಗಳ ರೂಪುರೇಷೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande