
ಬೆಂಗಳೂರು, 27 ಜುಲೈ (ಹಿ.ಸ.):
ಆ್ಯಂಕರ್:ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ ರಾಜ್ಯ ಸರ್ಕಾರ ಇನ್ನೂ ಸಮರ್ಪಕ ಪರಿಹಾರ ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿರುವುದಾಗಿ ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಬಳ್ಳಾರಿ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೂ ಭೇಟಿ ನೀಡುವುದಾಗಿ ಹೇಳಿದರು. ರಾಜ್ಯ ಸರ್ಕಾರ ಅಧಿಕೃತವಾಗಿ ಬರ ಘೋಷಿಸಿ ಕೇಂದ್ರಕ್ಕೆ ವರದಿ ಸಲ್ಲಿಸದೆ, ಕೇವಲ ಕೇಂದ್ರ ಸರ್ಕಾರವನ್ನು ಹಣಕ್ಕಾಗಿ ಒತ್ತಾಯಿಸುವುದು ಸರಿಯಲ್ಲ ಎಂದು ಟೀಕಿಸಿದರು.
ಮುಖ್ಯಮಂತ್ರಿ ಕೆಲ ಬರಪೀಡಿತ ಪ್ರದೇಶಗಳಿಗೆ ಕಾಟಾಚಾರಕ್ಕಾಗಿ ಭೇಟಿ ನೀಡಿದ್ದು, ಜಿಲ್ಲಾಧಿಕಾರಿಗಳ ವರದಿ ಆಧರಿಸಿ ಎಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿ ಬಹಿರಂಗಪಡಿಸಿಲ್ಲ. ಒಂದು ತಾಲೂಕಿಗೆ ಕೇವಲ ₹1 ಕೋಟಿ ನೀಡುವುದರಿಂದ ಬೋರ್‌ವೆಲ್ ದುರಸ್ತಿ ಸೇರಿದಂತೆ ಅಗತ್ಯ ಕಾಮಗಾರಿಗಳಿಗೂ ಸಾಕಾಗುವುದಿಲ್ಲ ಎಂದು ಹೇಳಿದರು.
ಇದೇ ವೇಳೆ, ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದ ಅಶೋಕ, ಕೆಲವು ವ್ಯಕ್ತಿಗಳು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸರು, ಸಿ.ಟಿ. ರವಿ ವಿರುದ್ಧ ಮಾತ್ರ ಎಫ್‌ಐಆರ್ ದಾಖಲಿಸಿರುವುದು ರಾಜಕೀಯ ಪ್ರೇರಿತ ಕ್ರಮ ಎಂದು ದೂರಿದರು. ಈ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಹೋರಾಟ ನಡೆಸುವುದಾಗಿ ಅವರು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.