ರಾಜ್ಯದಲ್ಲಿ ಮುಂದಿನ ಏಳು ದಿನ ಮಳೆ ಮುಂದುವರಿಕೆ
ಬೆಂಗಳೂರು, 27 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಪ್ರದೇಶಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನ
Rain forecast


ಬೆಂಗಳೂರು, 27 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಪ್ರದೇಶಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande