ಸಚಿವ ಸ್ಥಾನ ನೀಡಲು ಶಾಸಕ ಜಿ.ಎಸ್. ಪಾಟೀಲ್ ಒತ್ತಾಯ
ನವದೆಹಲಿ, 27 ಜುಲೈ (ಹಿ.ಸ.): ಆ್ಯಂಕರ್: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್. ಪಾಟೀಲ್ ಅವರು ತಮಗೂ ಸಚಿವ ಸ್ಥಾನ ನೀಡಬೇಕೆಂದು ಬಹಿರಂಗವಾಗಿ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ನವದೆಹಲಿ
ಸಂದರ್ಭಿಕ ಚಿತ್ರ


ನವದೆಹಲಿ, 27 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್. ಪಾಟೀಲ್ ಅವರು ತಮಗೂ ಸಚಿವ ಸ್ಥಾನ ನೀಡಬೇಕೆಂದು ಬಹಿರಂಗವಾಗಿ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಾಗಿ ದೀರ್ಘಕಾಲದಿಂದ ಸಲ್ಲಿಸಿರುವ ಸೇವೆಯನ್ನು ಪರಿಗಣಿಸುವಂತೆ ಹೈಕಮಂಡ್ ಅನ್ನು ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ.

ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದೊಂದಿಗೆ ನಿಷ್ಠೆಯಿಂದ ಕೆಲಸ ಮಾಡಿಕೊಂಡು ಬಂದಿರುವುದಾಗಿ ತಿಳಿಸಿರುವ ಜಿ.ಎಸ್. ಪಾಟೀಲ್, ಈ ಹಿಂದೆ ಜಿಲ್ಲೆಯಲ್ಲಿ ಪಕ್ಷದ ವಾತಾವರಣ ಹದಗೆಡಬಾರದು ಎಂಬ ಕಾರಣಕ್ಕಾಗಿಯೇ ತಾನು ಎಂದೂ ಸಚಿವ ಸ್ಥಾನಕ್ಕಾಗಿ ದುಂಬಾಲು ಬಿದ್ದಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ವೀರಶೈವ ಲಿಂಗಾಯತ (ರೆಡ್ಡಿ) ಸಮುದಾಯದ ಪ್ರಬಲ ನಾಯಕನಾಗಿ ಗುರುತಿಸಿಕೊಂಡಿರುವುದಾಗಿ ತಿಳಿಸಿರುವ ಅವರು, ಈ ಭಾಗದ ಜನರ ಹಾಗೂ ಮಠಾಧೀಶರ ಆಶಯದಂತೆ ತಮಗೆ ಸಂಪುಟದಲ್ಲಿ ಸೂಕ್ತ ಸ್ಥಾನ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹೊಸಮುಖಗಳು ಹಾಗೂ ಯುವಕರಿಗೆ ಅವಕಾಶ ನೀಡುವ ವಿಚಾರವಾಗಿ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದಿರುವ ಅವರು, ಹಿರಿಯ ಹಾಗೂ ಮೂರು-ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದವರಿಗೂ ಸಚಿವ ಸಂಪುಟದಲ್ಲಿ ಆದ್ಯತೆ ಸಿಗಬೇಕು ಎಂಬುದು ಪಕ್ಷದ ನಾಯಕರ ಇಚ್ಛೆಯಾಗಿದೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande