ರೈತರಿಗೆ ಬೆಂಬಲ ಬೆಲೆ ಬಾಕಿ ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಆರ್. ಅಶೋಕ ಆಗ್ರಹ
ಬೆಂಗಳೂರು, 27 ಜುಲೈ (ಹಿ.ಸ.): ಆ್ಯಂಕರ್:ರೈತರಿಂದ ಖರೀದಿಸಿರುವ ರಾಗಿ ಮತ್ತು ಜೋಳದ ಬೆಂಬಲ ಬೆಲೆಯ ಬಾಕಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ,
ಅಶೋಕ ಸಂಗ್ರಹ ಚಿತ್ರ


ಬೆಂಗಳೂರು, 27 ಜುಲೈ (ಹಿ.ಸ.):

ಆ್ಯಂಕರ್:ರೈತರಿಂದ ಖರೀದಿಸಿರುವ ರಾಗಿ ಮತ್ತು ಜೋಳದ ಬೆಂಬಲ ಬೆಲೆಯ ಬಾಕಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಮಾರ್ಚ್ ತಿಂಗಳಲ್ಲೇ ರೈತರಿಂದ ರಾಗಿ ಮತ್ತು ಜೋಳ ಖರೀದಿಸಲಾಗಿದ್ದು, ನಿಯಮಾನುಸಾರ 15 ದಿನಗಳೊಳಗೆ ರೈತರ ಬ್ಯಾಂಕ್ ಖಾತೆಗೆ ಹಣ ಜಮೆಯಾಗಬೇಕಿತ್ತು. ಆದರೆ ನಾಲ್ಕು ತಿಂಗಳು ಕಳೆದರೂ ಸುಮಾರು ₹1,200 ಕೋಟಿ ಬೆಂಬಲ ಬೆಲೆ ಬಾಕಿ ಉಳಿದಿದ್ದು, ಇದರಿಂದ ಲಕ್ಷಾಂತರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದ್ದಾರೆ.

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಉಳುಮೆ, ಬಿತ್ತನೆ, ಬೀಜ, ಗೊಬ್ಬರ ಹಾಗೂ ಕೂಲಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಹಣದ ಅಗತ್ಯವಿದ್ದು, ಸರ್ಕಾರದಿಂದ ಹಣ ಬಿಡುಗಡೆಯಾಗದ ಕಾರಣ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರವು ವಿವಿಧ ಯೋಜನೆಗಳು ಹಾಗೂ ಇತರೆ ಕಾರ್ಯಗಳಿಗೆ ನೂರಾರು ಕೋಟಿ ರೂಪಾಯಿ ವೆಚ್ಚ ಮಾಡುತ್ತಿರುವಾಗ, ರೈತರಿಗೆ ನೀಡಬೇಕಾದ ಬೆಂಬಲ ಬೆಲೆಯ ಬಾಕಿ ಮೊತ್ತವನ್ನು ಬಿಡುಗಡೆ ಮಾಡದಿರುವುದು ರೈತ ವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ಅಶೋಕ ಟೀಕಿಸಿದ್ದಾರೆ.

ಬಾಕಿ ಇರುವ ₹1,200 ಕೋಟಿ ಮೊತ್ತವನ್ನು ಕೂಡಲೇ ರೈತರ ಖಾತೆಗಳಿಗೆ ನೇರವಾಗಿ ಜಮೆ ಮಾಡಬೇಕು. ಇಲ್ಲವಾದರೆ ರಾಜ್ಯದ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande