
ಉಡುಪಿ, 28 ಜುಲೈ (ಹಿ.ಸ.):
ಆ್ಯಂಕರ್:
ವಿದ್ಯಾರ್ಥಿಗಳ ಪ್ರತಿಭಟನೆಯ ನೆಪದಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಉಡುಪಿಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಶಾಸಕರಾದ ಸುನಿಲ್ ಕುಮಾರ್, ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.
ಈ ವೇಳೆ ಪ್ರತಿಭಟನಾಕಾರರು ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ತಮ್ಮ ಆಕ್ಷೇಪ ವ್ಯಕ್ತಪಡಿಸಿ, ಸಂಬಂಧಿತ ಬೆಳವಣಿಗೆಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.