
ವಿಜಯಪುರ, 28 ಜುಲೈ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಶಾಸಕ ಅಶೋಕ್ ಮನಗೂಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿದರು.
ಸಾರ್ವಜನಿಕರು ಕುಡಿಯುವ ನೀರು, ರಸ್ತೆ, ವಿದ್ಯುತ್, ಪಿಂಚಣಿ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ತಕ್ಷಣವೇ ಪರಿಹರಿಸುವಂತೆ ಸೂಚಿಸಿದರು. ಉಳಿದ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಂಡು ಶೀಘ್ರದಲ್ಲಿ ಬಗೆಹರಿಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಶೋಕ್ ಮನಗೂಳಿ, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದ್ದು, ಸಾರ್ವಜನಿಕರು ಯಾವುದೇ ಸಂಕೋಚವಿಲ್ಲದೆ ತಮ್ಮ ಸಮಸ್ಯೆಗಳನ್ನು ತಿಳಿಸಬಹುದು ಎಂದು ಹೇಳಿದರು. ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande