ಲೋಕಸಭೆಯಲ್ಲಿಂದು ಪ್ರಶ್ನೆಪತ್ರ ಸೋರಿಕೆ ತಡೆ ಮಸೂದೆ ಕುರಿತು ಚರ್ಚೆ ಸಾಧ್ಯತೆ
ನವದೆಹಲಿ, ಜುಲೈ 28(ಹಿ.ಸ.): ಆ್ಯಂಕರ್:ದೇಶದಾದ್ಯಂತ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಇಂದು ಸಂಸತ್ತಿನತ್ತ ನೆಟ್ಟಿದೆ. ಹಲವು ದಿನಗಳಿಂದ ಮುಂದುವರಿದಿದ್ದ ಸಂಸತ್ತಿನ ಸ್ಥಗಿತಕ್ಕೆ ಅಂತ್ಯ ಕಾಣುವ ನಿರೀಕ್ಷೆಯಿದ್ದು, ಲೋಕ ಪರೀಕ್ಷೆ (ಅನುಚಿತ ಸಾಧನಗಳ ತಡೆ) ತಿದ್ದುಪಡಿ ಮಸೂದೆ–2026 ಕುರಿತು ಲೋಕಸಭೆ
सांकेतिक।


ನವದೆಹಲಿ, ಜುಲೈ 28(ಹಿ.ಸ.):

ಆ್ಯಂಕರ್:ದೇಶದಾದ್ಯಂತ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಇಂದು ಸಂಸತ್ತಿನತ್ತ ನೆಟ್ಟಿದೆ. ಹಲವು ದಿನಗಳಿಂದ ಮುಂದುವರಿದಿದ್ದ ಸಂಸತ್ತಿನ ಸ್ಥಗಿತಕ್ಕೆ ಅಂತ್ಯ ಕಾಣುವ ನಿರೀಕ್ಷೆಯಿದ್ದು, ಲೋಕ ಪರೀಕ್ಷೆ (ಅನುಚಿತ ಸಾಧನಗಳ ತಡೆ) ತಿದ್ದುಪಡಿ ಮಸೂದೆ–2026 ಕುರಿತು ಲೋಕಸಭೆಯಲ್ಲಿ ಇಂದು ಚರ್ಚೆ ಆರಂಭವಾಗುವ ಸಾಧ್ಯತೆ ಇದೆ. ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರ ನೇತೃತ್ವದಲ್ಲಿ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಮಸೂದೆ ಕುರಿತು ಚರ್ಚೆಗೆ ಒಪ್ಪಿಗೆ ಸೂಚಿಸಿರುವುದಾಗಿ ತಿಳಿದುಬಂದಿದೆ.

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದ ಬಳಿಕ ವಿದ್ಯಾರ್ಥಿ ಚಳವಳಿ ಹಾಗೂ ಪ್ರಶ್ನೆಪತ್ರ ಸೋರಿಕೆ ಪ್ರಕರಣಗಳ ಹಿನ್ನೆಲೆಯಲ್ಲಿ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ನಿರಂತರ ಪ್ರತಿಭಟನೆ ನಡೆಸಿದ್ದವು. ಜಂತರ್-ಮಂತರ್‌ನಲ್ಲಿ 36 ದಿನಗಳ ಕಾಲ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಬಳಿಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಿದ್ದರು.

ಪ್ರಶ್ನೆಪತ್ರ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಮಾಹಿತಿ ತಂತ್ರಜ್ಞಾನ ತಜ್ಞ ನಂದನ್ ನೀಲೇಕಣಿ ಅವರ ನೇತೃತ್ವದಲ್ಲಿ ಕಾರ್ಯಪಡೆಯನ್ನು ರಚಿಸಲಾಗಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಭದ್ರತೆಯನ್ನು ಹೆಚ್ಚಿಸಲು ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

ಸಂಸತ್ ಮೆರವಣಿಗೆಯ ವೇಳೆ ಜುಲೈ 20ರಂದು ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ವಿಡಿಯೊ ಸಂದೇಶದ ಮೂಲಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಫ್ರೆಂಡ್ಸ್ ಎಂದು ಸಂಬೋಧಿಸಿದ ಅವರು, ಯುವಕರ ಆತಂಕ ಮತ್ತು ಬೇಡಿಕೆಗಳ ಬಗ್ಗೆ ಸರ್ಕಾರ ಸಂಪೂರ್ಣವಾಗಿ ಸಂವೇದನಾಶೀಲವಾಗಿದ್ದು, ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಬದ್ಧವಾಗಿದೆ ಎಂದು ಭರವಸೆ ನೀಡಿದ್ದರು.

ಇದೇ ವೇಳೆ ಪ್ರತಿಪಕ್ಷವು ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲಪ್ರಯೋಗ ನಡೆದಿರುವ ವಿಚಾರವನ್ನು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿ, ಇತರೆ ಎಲ್ಲ ಕಾರ್ಯಗಳನ್ನು ಸ್ಥಗಿತಗೊಳಿಸಿ ಮೊದಲು ಈ ವಿಷಯದ ಕುರಿತು ಚರ್ಚೆ ನಡೆಸಬೇಕೆಂದು ಆಗ್ರಹಿಸಿತು. ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಪ್ರಧಾನಿ ಕ್ಷಮೆಯಾಚಿಸಬೇಕು ಹಾಗೂ ಕೇಂದ್ರ ಗೃಹ ಸಚಿವರು ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ಗದ್ದಲದ ನಡುವೆಯೇ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಪ್ರಶ್ನೆಪತ್ರ ಸೋರಿಕೆ ತಡೆ ಮಸೂದೆಯನ್ನು ಸದನದಲ್ಲಿ ಮಂಡಿಸಿದರು.

ಮಸೂದೆ ಮಂಡನೆಯ ವೇಳೆ ಪ್ರತಿಪಕ್ಷಗಳು ಒಂದು ಗಂಟೆಯ ಅವಧಿಯಲ್ಲಿ ಒಟ್ಟು 92 ತಿದ್ದುಪಡಿ ಪ್ರಸ್ತಾವನೆಗಳನ್ನು ಸಲ್ಲಿಸಿದರೂ, ಚರ್ಚೆಯಲ್ಲಿ ಭಾಗವಹಿಸಲು ಸಮ್ಮತಿಸಲಿಲ್ಲ. ದಿನವಿಡೀ ಸದನದ ಕಾರ್ಯ ಕಲಾಪ ಅಸ್ತವ್ಯಸ್ತಗೊಂಡ ನಂತರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಚರ್ಚೆ ನಡೆಯದಿದ್ದರೂ ಸರ್ಕಾರ ಮಸೂದೆಯನ್ನು ಅಂಗೀಕರಿಸುವ ಕ್ರಮ ಕೈಗೊಳ್ಳಬೇಕಾಗಬಹುದು ಎಂದು ಎಚ್ಚರಿಕೆ ನೀಡಿದರು.

ನಂತರ ಲೋಕಸಭಾಧ್ಯಕ್ಷ ಓಂ ಬಿರ್ಲಾ ಎಲ್ಲಾ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಮಧ್ಯಂತರ ಪರಿಹಾರ ಕಂಡುಹಿಡಿದರು. ಅದರಂತೆ ಇಂದು ಪರೀಕ್ಷಾ ವ್ಯವಸ್ಥೆಯ ಸುಧಾರಣೆಗಳು ಹಾಗೂ ಪ್ರಶ್ನೆಪತ್ರ ಸೋರಿಕೆ ತಡೆ ಮಸೂದೆ ಕುರಿತು ಲೋಕಸಭೆಯಲ್ಲಿ ಆರು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಲು ಸಮಯ ನಿಗದಿಪಡಿಸಲಾಗಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande