ಸಿಂದಗಿಯಲ್ಲಿ ಆಪರೇಷನ್ ರೈಸ್ ಹಾಗೂ ಬೇಡ ಬ್ರೋ ಜಾಗೃತಿ ಅಭಿಯಾನ
ವಿಜಯಪುರ, 28 ಜುಲೈ (ಹಿ.ಸ.) ಆ್ಯಂಕರ್ : ಕರ್ನಾಟಕ ಸರ್ಕಾರದ ಮಾದಕ ದ್ರವ್ಯಗಳ ನಿರ್ಮೂಲನೆ ಹಾಗೂ ಯುವಜನರಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಹಮ್ಮಿಕೊಂಡಿರುವ ‘ಆಪರೇಷನ್ ರೈಸ್’ ಹಾಗೂ ‘ಬೇಡ ಬ್ರೋ’ ಅಭಿಯಾನದ ಅಂಗವಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲ ವಿಶೇಷ ಜಾಗೃತಿ ಕಾರ್ಯಕ್ರಮ ನಡ
ಸಭೆ


ವಿಜಯಪುರ, 28 ಜುಲೈ (ಹಿ.ಸ.)

ಆ್ಯಂಕರ್ : ಕರ್ನಾಟಕ ಸರ್ಕಾರದ ಮಾದಕ ದ್ರವ್ಯಗಳ ನಿರ್ಮೂಲನೆ ಹಾಗೂ ಯುವಜನರಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಹಮ್ಮಿಕೊಂಡಿರುವ ‘ಆಪರೇಷನ್ ರೈಸ್’ ಹಾಗೂ ‘ಬೇಡ ಬ್ರೋ’ ಅಭಿಯಾನದ ಅಂಗವಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಯಿತು.

ಸಿಂದಗಿ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಂದಗಿ ಕ್ಷೇತ್ರದ ಶಾಸಕ ಅಶೋಕ್ ಎಂ. ಮನಗೂಳಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಸುಮಾರು 900 ರಿಂದ 1000 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾದಕ ದ್ರವ್ಯಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಕಾನೂನು ಸಂಬಂಧಿತ ದುಷ್ಪರಿಣಾಮಗಳ ಕುರಿತು ಮಾಹಿತಿ ಪಡೆದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಅಶೋಕ್ ಎಂ. ಮನಗೂಳಿ, ವಿದ್ಯಾರ್ಥಿಗಳೇ ದೇಶದ ಭವಿಷ್ಯವಾಗಿದ್ದು, ಅವರ ಜೀವನವನ್ನು ಹಾಳು ಮಾಡುವ ಮಾದಕ ವ್ಯಸನದಿಂದ ದೂರವಿರುವುದು ಅತ್ಯಗತ್ಯ ಎಂದು ತಿಳಿಸಿದರು. ಉತ್ತಮ ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಯುವಕರು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಮಾಜದಲ್ಲಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸಲು ಪ್ರತಿಯೊಬ್ಬ ವಿದ್ಯಾರ್ಥಿಯೂ ರಾಯಭಾರಿಯಾಗಬೇಕು ಎಂದು ಸಲಹೆ ನೀಡಿದರು.

ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ಬಳಕೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು, ಕುಟುಂಬದ ಮೇಲೆ ಬೀರುವ ಪರಿಣಾಮ, ಶಿಕ್ಷಣದ ಮೇಲೆ ಆಗುವ ದುಷ್ಪರಿಣಾಮ ಹಾಗೂ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಗೆ ಸಂಬಂಧಿಸಿದ ಕಾನೂನು ಕ್ರಮಗಳ ಕುರಿತು ವಿವರವಾಗಿ ತಿಳಿಸಿದರು.

ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರುವ ಹಾಗೂ ಇತರರಲ್ಲಿಯೂ ಜಾಗೃತಿ ಮೂಡಿಸುವ ಪ್ರತಿಜ್ಞೆ ಸ್ವೀಕರಿಸಿದರು. ಅಭಿಯಾನದ ಮೂಲಕ ಯುವಜನರಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸಿ ಆರೋಗ್ಯಕರ ಹಾಗೂ ಸುರಕ್ಷಿತ ಸಮಾಜ ನಿರ್ಮಾಣಕ್ಕೆ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಪ್ರಯತ್ನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಶಾಲಾ-ಕಾಲೇಜುಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande