
ಮಂಡ್ಯ, 28 ಜುಲೈ (ಹಿ.ಸ.):
ಆ್ಯಂಕರ್:
ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಶೋಭಾರಾಣಿ ವಿ. ಜೆ. ಅವರ ನೇತೃತ್ವದಲ್ಲಿ ಆಪರೇಷನ್ ರೈಸ್ ಹಾಗೂ ಡ್ರಗ್ಸ್ ಬೇಡ ಬ್ರೋ ಅಭಿಯಾನದ ಅಂಗವಾಗಿ ಮಾದಕ ವ್ಯಸನ ಮುಕ್ತ ಮಂಡ್ಯ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ನಡೆಯಿತು.
ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಜಾಥಾಗೆ ಚಾಲನೆ ನೀಡಿದರು. ಸರ್ಕಾರಿ ಮಹಿಳಾ ಕಾಲೇಜಿನಿಂದ ಆರಂಭವಾದ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿತು.
ಜಾಥಾದಲ್ಲಿ ಜಿಲ್ಲಾಧಿಕಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಮಾದಕ ವ್ಯಸನ ವಿರುದ್ಧ ಜಾಗೃತಿ ಮೂಡಿಸುವ ಸಂಕಲ್ಪ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.