ಸಂಪುಟ ವಿಸ್ತರಣೆ: ಇಂದು ಹೈಕಮಾಂಡ್ ಸಭೆಯಲ್ಲಿ ಅಂತಿಮ ತೀರ್ಮಾನ;ಸಿದ್ದರಾಮಯ್ಯ
ಬೆಂಗಳೂರು, 28 ಜುಲೈ (ಹಿ.ಸ.): ಆ್ಯಂಕರ್: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಅಂತಿಮ ಘಟಕ್ಕೆ ತಲುಪಿದೆ. ನಾನಾ ಕಾರಣಗಳಿಂದಾಗಿ ಮುಂದೂಡಲ್ಪಡುತ್ತಾ ಬಂದಿದ್ದ ಸಚಿವ ಸಂಪುಟ ವಿಸ್ತರಣೆ ಕುರಿತು ಇಂದು ರಾತ್ರಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು,
ಸಂದರ್ಭಿಕ ಚಿತ್ರ


ಬೆಂಗಳೂರು, 28 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಅಂತಿಮ ಘಟಕ್ಕೆ ತಲುಪಿದೆ. ನಾನಾ ಕಾರಣಗಳಿಂದಾಗಿ ಮುಂದೂಡಲ್ಪಡುತ್ತಾ ಬಂದಿದ್ದ ಸಚಿವ ಸಂಪುಟ ವಿಸ್ತರಣೆ ಕುರಿತು ಇಂದು ರಾತ್ರಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

ಮೈಸೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇವತ್ತು ರಾತ್ರಿ 8 ಗಂಟೆಗೆ ದೆಹಲಿಯಲ್ಲಿ ಸಭೆ ಇದೆ, ಅದರಲ್ಲಿ ಸಂಪುಟ ವಿಸ್ತರಣೆ ಅಂತಿಮಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ದೆಹಲಿಯಿಂದ ವಾಪಸ್ ಬಂದ ಬಳಿಕವಷ್ಟೇ ಈ ಬಗ್ಗೆ ಹೆಚ್ಚಿನ ವಿವರಗಳನ್ನು ಮಾತನಾಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande