ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ಕರ್ನಾಟಕ ಬಂದ್: ಪ್ರವೀಣ್ ಶೆಟ್ಟಿ
ಬೆಂಗಳೂರು, 28 ಜುಲೈ (ಹಿ.ಸ.): ಆ್ಯಂಕರ್: ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದರ ಬೆನ್ನಲ್ಲೇ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ರಾಜ್ಯ ಸರ್ಕಾರದ ವಿರು
praveen shetty


ಬೆಂಗಳೂರು, 28 ಜುಲೈ (ಹಿ.ಸ.):

ಆ್ಯಂಕರ್:

ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದರ ಬೆನ್ನಲ್ಲೇ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ತಮಿಳುನಾಡಿಗೆ ನೀರು ಬಿಟ್ಟರೆ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಾಗೂ 'ಕರ್ನಾಟಕ ಬಂದ್' ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ವೇಳೆಗಾಗಲೇ ರಾಜ್ಯದಲ್ಲಿ ಶೇಕಡಾ 70ರಷ್ಟು ಮಳೆಯಾಗಬೇಕಿತ್ತು. ಆದರೆ, ಮುಂಗಾರು ಮಳೆಯು ಸಂಪೂರ್ಣವಾಗಿ ಕೈಕೊಟ್ಟಿದ್ದು, ಪ್ರಸ್ತುತ ಕೇವಲ ಶೇಕಡಾ 20ರಷ್ಟು ಮಾತ್ರ ಮಳೆಯಾಗಿದೆ. ರಾಜ್ಯದಲ್ಲೇ ಕುಡಿಯುವ ನೀರಿಗೂ ಹಾಗೂ ಕೃಷಿಗೆ ತೀವ್ರ ಹಾಹಾಕಾರ ಉಂಟಾಗಿರುವಾಗ ತಮಿಳುನಾಡಿಗೆ ನೀರು ಬಿಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕನ್ನಡಿಗರ ಹಿತಾಸಕ್ತಿಯನ್ನು ಬಲಿಗೊಟ್ಟು ಅನ್ಯ ರಾಜ್ಯಕ್ಕೆ ನೀರು ಹರಿಸುವ ಹುನ್ನಾರವನ್ನು ಸರ್ಕಾರ ಕೈಬಿಡಬೇಕು. ಒಂದು ವೇಳೆ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿದು ನೀರು ಹರಿಸಲು ಮುಂದಾದರೆ, ಕರವೇ ನೇತೃತ್ವದಲ್ಲಿ ರಾಜ್ಯದ ಜನರನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ಹಾಗೂ ಬಂದ್ ಹಮ್ಮಿಕೊಳ್ಳುವುದಾಗಿ ಪ್ರವೀಣ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande