ಕಾವೇರಿ ವಿಚಾರದಲ್ಲಿ ಸಿಎಂ ಸಂಪೂರ್ಣ ವೈಫಲ್ಯ: ಆರ್. ಅಶೋಕ್ ಕಿಡಿ
ಬೆಂಗಳೂರು, 28 ಜುಲೈ (ಹಿ.ಸ.): ಆ್ಯಂಕರ್: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಮಂಡಳಿ ನೀಡಿರುವ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರತಿ ಪಕ್ಷದ ನಾಯಕ ಆರ್. ಅಶೋಕ್, ಇದು ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಹಾಗ
ಸಂದರ್ಭಿಕ ಚಿತ್ರ


ಬೆಂಗಳೂರು, 28 ಜುಲೈ (ಹಿ.ಸ.):

ಆ್ಯಂಕರ್:

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಮಂಡಳಿ ನೀಡಿರುವ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರತಿ ಪಕ್ಷದ ನಾಯಕ ಆರ್. ಅಶೋಕ್, ಇದು ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರು ಭಾಗದ ಜನರಿಗೆ ಕುಡಿಯುವ ನೀರಿಲ್ಲದೆ ಪರದಾಡುವ ಪರಿಸ್ಥಿತಿಯಿದ್ದರೂ, ಸರ್ಕಾರ ಅನ್ಯ ರಾಜ್ಯಕ್ಕೆ ನೀರುಣಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಪ್ರಾಧಿಕಾರದ ವಿಚಾರಣೆ ದಿನಾಂಕ ನಿಗದಿಯಾಗಿದ್ದರೂ, ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಪ್ರಮುಖ ಕಾನೂನು ತಜ್ಞರ ಜತೆ ಸಭೆ ನಡೆಸಿ ವಸ್ತುಸ್ಥಿತಿಯನ್ನು ಸಮರ್ಥವಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ. ಸಂಪುಟ ರಚನೆ ಹಾಗೂ ರಾಜಕೀಯ ಚಟುವಟಿಕೆಗಳಿಗೆ ದೆಹಲಿಗೆ ಅಲೆದಾಡುವ ಸಿಎಂ, ಕಾವೇರಿ ವಿಚಾರದಲ್ಲಿ ಒಳ್ಳೆಯ ವಕೀಲರನ್ನು ಭೇಟಿಯಾಗಿ ಚರ್ಚಿಸಲು ಸಮಯ ಮಾಡಿಕೊಳ್ಳಲಿಲ್ಲ.

ರಾಜ್ಯದ ರೈತರ ಹಿತ ಕಾಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಈಗಾಗಲೇ ಮಂಡ್ಯದಲ್ಲಿ ರೈತರು ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ ಎಂದು ಆರ್. ಅಶೋಕ್ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನಸಂಖ್ಯೆಯಿದ್ದು, ಕೇವಲ 50 ಲಕ್ಷ ಜನರಿಗೆ ಮಾತ್ರ ಸದ್ಯ ನೀರು ಪೂರೈಸಲಾಗುತ್ತಿದೆ. ಇನ್ನುಳಿದ ಒಂದು ಕೋಟಿ ಜನರಿಗೆ ನೀರೇ ಸಿಗುತ್ತಿಲ್ಲ.

ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಡೆಡ್ ಸ್ಟೋರೇಜ್ ಲೆಕ್ಕ ಹಾಕಿದರೂ 4-5 ಟಿಎಂಸಿ ನೀರು ಕೂಡ ಉಳಿಯುವುದಿಲ್ಲ. ಇಂಥದ್ರಲ್ಲಿ ಪ್ರತಿದಿನ 3,500 ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುವುದು ಕನ್ನಡಿಗರಿಗೆ ಬಗೆದ ದ್ರೋಹವಾಗಿದೆ. ತಮಿಳುನಾಡಿನಲ್ಲಿ ಇಂಡಿ ಒಕ್ಕೂಟದ ಸರ್ಕಾರ ವಿರುವುದರಿಂದ, ಹೈಕಮಾಂಡ್ ಮೆಚ್ಚಿಸಲು ರಾಜ್ಯದ ಹಿತಾಸಕ್ತಿಯನ್ನು ಬಲಿ ಕೊಡಲಾಗುತ್ತಿದೆ ಎಂದು ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande