
ಬೆಂಗಳೂರು, 28 ಜುಲೈ (ಹಿ.ಸ.)
ಆ್ಯಂಕರ್:
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಫೇಸ್ಬುಕ್ ಪೋಸ್ಟ್ಗಳು ಹಾಗೂ ಭಾಷಣಗಳನ್ನು ಹುಡುಕಿ ಕೇಸ್ ಹಾಕುವುದೇ ಇಂದಿನ ಗೃಹ ಇಲಾಖೆಯ ಪ್ರಮುಖ ಆದ್ಯತೆಯಾಗಿದೆ ಎಂದು ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ. ರವಿ ಅವರ ಮೇಲೆ ಸರಣಿ ದೂರುಗಳನ್ನು ದಾಖಲಿಸುವ ಮೂಲಕ ಕಿರುಕುಳ ನೀಡುವ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ ದಿನೇ ದಿನೇ ದರೋಡೆಗಳು, ಕೊಲೆಗಳು ಹಾಗೂ ಪೊಲೀಸರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ.
ಆದರೆ ಇವುಗಳ ಬಗ್ಗೆ ಯಾವುದೇ ಪರಿಶೀಲನೆ ನಡೆಸದ ಗೃಹ ಇಲಾಖೆ, ಕೇವಲ ಬಿಜೆಪಿಯವರನ್ನು ಮತ್ತು ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಎಷ್ಟೇ ಅವಹೇಳನ ಮಾಡಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದರು. ಇದೇ ವೇಳೆ ಕೆಪಿಎಸ್ಸಿ ಹಗರಣದ ಬಗ್ಗೆಯೂ ಮಾತನಾಡಿದ ಅವರು, ಹುದ್ದೆಗಳ ಹರಾಜಿನ ಹಿಂದೆ ಸರ್ಕಾರದ ಪಾಲು ಎಷ್ಟಿದೆ ಎಂಬುದನ್ನು ಮುಖ್ಯಮಂತ್ರಿಗಳು ಕೂಡಲೇ ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII