ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ ಹಾವಳಿ: ಡಿಕೆಶಿ ಹಳೆಯ ಹೇಳಿಕೆ ನೆನಪಿಸಿ ಮಾಜಿ ಸಚಿವ ಸುರೇಶ್ ಕುಮಾರ್ ವಾಗ್ದಾಳಿ
ಬೆಂಗಳೂರು, 28 ಜುಲೈ (ಹಿ.ಸ.): ಆ್ಯಂಕರ್: ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ಗಳು ಹಾಗೂ ಬ್ಯಾನರ್ಗಳ ಹಾವಳಿ ಮತ್ತೆ ಮುನ್ನೆಲೆಗೆ ಬಂದಿದೆ. ನಿಯಮ ಉಲ್ಲಂಘನೆ ಹಾಗೂ ಡಬಲ್ ಸ್ಟ್ಯಾಂಡರ್ಡ್ ಧೋರಣೆಯ ವಿರುದ್ಧ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಶಾಸಕ ಎಸ್. ಸುರೇಶ್ ಕುಮಾರ್ ಆಡಳಿತಾರೂಢ ಕಾಂಗ್ರೆಸ
suresh-kumar


ಬೆಂಗಳೂರು, 28 ಜುಲೈ (ಹಿ.ಸ.):

ಆ್ಯಂಕರ್:

ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ಗಳು ಹಾಗೂ ಬ್ಯಾನರ್ಗಳ ಹಾವಳಿ ಮತ್ತೆ ಮುನ್ನೆಲೆಗೆ ಬಂದಿದೆ. ನಿಯಮ ಉಲ್ಲಂಘನೆ ಹಾಗೂ ಡಬಲ್ ಸ್ಟ್ಯಾಂಡರ್ಡ್ ಧೋರಣೆಯ ವಿರುದ್ಧ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಶಾಸಕ ಎಸ್. ಸುರೇಶ್ ಕುಮಾರ್ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಜನ್ಮದಿನದ ಅಂಗವಾಗಿ ನಗರದಲ್ಲಿ ಹಾಕಲಾಗಿರುವ ಬೃಹತ್ ಫ್ಲೆಕ್ಸ್ಗಳ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವ ಮೂಲಕ ಸರ್ಕಾರದ ದ್ವಂದ್ವ ನೀತಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ.

ಡಿಕೆಶಿ ನೀಡಿದ್ದ ಆ ಖಡಕ್ ವಾರ್ನಿಂಗ್ ಏನು?

ಕೆಲ ತಿಂಗಳುಗಳ ಹಿಂದೆ ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದ ಕಾಲದಲ್ಲಿ ನಗರದ ಶಾಸಕರ ಮಹತ್ವದ ಸಭೆಯನ್ನು ನಡೆಸಿದ್ದರು. ಆ ಸಂದರ್ಭದಲ್ಲಿ, ಬೆಂಗಳೂರಿನಲ್ಲಿ ಎಷ್ಟೇ ಪ್ರಭಾವಿ ನಾಯಕರ ಜನ್ಮದಿನಗಳಿರಲಿ, ಯಾವುದೇ ಕಾರಣಕ್ಕೂ ಅನಧಿಕೃತ ಫ್ಲೆಕ್ಸ್ ಅಥವಾ ಬ್ಯಾನರ್ ಅಳವಡಿಕೆಗೆ ಅವಕಾಶ ನೀಡುವುದೇ ಇಲ್ಲ. ಒಂದು ವೇಳೆ ನಿಯಮ ಮೀರಿ ಫ್ಲೆಕ್ಸ್ ಹಾಕಿದರೆ ಅಂಥವರಿಗೆ ಕನಿಷ್ಠ 1 ಲಕ್ಷ ರೂಪಾಯಿ ಭಾರಿ ದಂಡ ವಿಧಿಸಲಾಗುವುದು ಎಂದು ಗಂಭೀರ ಎಚ್ಚರಿಕೆ ನೀಡಿದ್ದರು.

ನಂತರದ ದಿನಗಳಲ್ಲಿ ಮುಖ್ಯಮಂತ್ರಿಯಾದ ಬಳಿಕವೂ ಅವರು ಇದೇ ಮಾತನ್ನು ಪದೇ ಪದೇ ಪುನರುಚ್ಚರಿಸಿದ್ದರು. ಇದೀಗ ಅದೇ ಹಳೆಯ ಮಾತನ್ನು ನೆನಪಿಸಿರುವ ಸುರೇಶ್ ಕುಮಾರ್, ಸಿಎಂ ಘೋಷಣೆಗಳು ಕೇವಲ ಕಾಗದದ ಮೇಲಷ್ಟೇ ಉಳಿದಿವೆ ಎಂದು ವ್ಯಂಗ್ಯವಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ಪ್ರಮುಖ ರಸ್ತೆಗಳಲ್ಲಿ ಬೃಹತ್ ಫ್ಲೆಕ್ಸ್ಗಳು ರಾರಾಜಿಸುತ್ತಿವೆ. ಇದನ್ನು ಟೀಕಿಸಿರುವ ಸುರೇಶ್ ಕುಮಾರ್, ಇವರು ಆಳುವ ಪಕ್ಷದ ಅತ್ಯಂತ ಪ್ರಭಾವಿ ನಾಯಕರಾಗಿರುವುದರಿಂದಲೇ ಇವರಿಗೆ ಮಾತ್ರ ಕಾನೂನಿನಿಂದ ವಿಶೇಷ ವಿನಾಯಿತಿ ಸಿಕ್ಕಂತಿದೆ, ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande