ಕಾವೇರಿ ನೀರು ಬಿಡುಗಡೆ ಆದೇಶ: ದೆಹಲಿಯಲ್ಲಿ ಇಂದು ವಕೀಲರೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ
ನವದೆಹಲಿ, 29 ಜುಲೈ (ಹಿ.ಸ.): ಆ್ಯಂಕರ್: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ 11.30ಕ್ಕೆ ದೆಹಲಿಯಲ್ಲಿ ಕರ್ನಾಟಕದ ಪರ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ಮಹ
CM DKS file photo


ನವದೆಹಲಿ, 29 ಜುಲೈ (ಹಿ.ಸ.):

ಆ್ಯಂಕರ್:

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ 11.30ಕ್ಕೆ ದೆಹಲಿಯಲ್ಲಿ ಕರ್ನಾಟಕದ ಪರ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರಾದ ಮೋಹನ್ ಕಾತಾರಕಿ ಸೇರಿದಂತೆ ಕಾನೂನು ತಜ್ಞರೊಂದಿಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಿರುವ ಸಿಎಂ, ಕರ್ನಾಟಕದ ರೈತರು ಮತ್ತು ರಾಜ್ಯದ ಹಿತಾಸಕ್ತಿಯನ್ನು ಕಾಪಾಡಲು ಕೈಗೊಳ್ಳಬಹುದಾದ ಕಾನೂನು ಹಾಗೂ ಆಡಳಿತಾತ್ಮಕ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande