ರೈತರ ಸಂಕಷ್ಟಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಹಿರಿಯೂರಿನಲ್ಲಿ ಅಶೋಕ ಆರೋಪ
ಚಿತ್ರದುರ್ಗ, 29 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಎರಡು ದಿನಗಳ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲಾ ಪ್ರವಾಸ ಆರಂಭಿಸಿದ್ದು, ಮೊದಲ ದಿನ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿ ಗ್ರಾಮಕ್ಕೆ ಭ
Ashok visit


ಚಿತ್ರದುರ್ಗ, 29 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಎರಡು ದಿನಗಳ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲಾ ಪ್ರವಾಸ ಆರಂಭಿಸಿದ್ದು, ಮೊದಲ ದಿನ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ನೀರಿನ ಕೊರತೆಯಿಂದ ಹಾನಿಗೊಳಗಾದ ಸೂರ್ಯಕಾಂತಿ ಬೆಳೆಗಳನ್ನು ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ತಿಂಗಳುಗಟ್ಟಲೆ ಶ್ರಮಪಟ್ಟು ಹಾಗೂ ಸಾಲ ಮಾಡಿ ಬೆಳೆದ ರೈತರ ಬೆಳೆಗಳು ನೀರಿಲ್ಲದೆ ಒಣಗಿ ಹೋಗುತ್ತಿದ್ದು, ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಬರ ಮತ್ತು ಬೆಳೆ ನಷ್ಟದಿಂದ ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಸಂಪುಟ ವಿಸ್ತರಣೆ ಹಾಗೂ ದೆಹಲಿ ಭೇಟಿಗಳಲ್ಲೇ ಸರ್ಕಾರ ನಿರತವಾಗಿದ್ದು, ರೈತರ ಕಣ್ಣೀರನ್ನು ಕಡೆಗಣಿಸಿದೆ ಎಂದು ಆರೋಪಿಸಿದರು.

ತಕ್ಷಣವೇ ಬೆಳೆ ಹಾನಿ ಸಮೀಕ್ಷೆ ನಡೆಸಿ, ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಅನ್ನದಾತರ ಹಿತ ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ರೈತರ ಪರವಾಗಿ ಬಿಜೆಪಿ ಸದಾ ನಿಲ್ಲಲಿದೆ ಎಂದು ಅಶೋಕ ಹೇಳಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande