
ನವದೆಹಲಿ, 29 ಜುಲೈ (ಹಿ.ಸ.):
ಆ್ಯಂಕರ್:ಜಾಗತಿಕ ಹುಲಿ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ಕೋರಿದ್ದು, ವಿಶ್ವದ ಒಟ್ಟು ಹುಲಿ ಜನಸಂಖ್ಯೆಯ ಶೇ. 70ರಷ್ಟು ಭಾರತದಲ್ಲಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ.
ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಭಾರತದ ಹುಲಿ ಸಂರಕ್ಷಣಾ ಪ್ರಯತ್ನಗಳು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವ ಶತಮಾನಗಳ ಸಂಸ್ಕೃತಿಯಿಂದ ಪ್ರೇರಿತವಾಗಿದ್ದು, ಜನರ ಸಾಮೂಹಿಕ ಸಂಕಲ್ಪದಿಂದ ಮತ್ತಷ್ಟು ಬಲಗೊಂಡಿವೆ ಎಂದು ತಿಳಿಸಿದ್ದಾರೆ.
ವಿಜ್ಞಾನ ಆಧಾರಿತ ಸಂರಕ್ಷಣೆ, ಸ್ಥಳೀಯ ಸಮುದಾಯಗಳ ಭಾಗವಹಿಸುವಿಕೆ ಹಾಗೂ ಸುಸ್ಥಿರ ಅಭಿವೃದ್ಧಿಯ ಮೂಲಕ ಹುಲಿ ಸಂರಕ್ಷಣೆಯನ್ನು ಇನ್ನಷ್ಟು ಬಲಪಡಿಸುವ ನಮ್ಮ ಬದ್ಧತೆಯನ್ನು ಈ ಸಂದರ್ಭದಲ್ಲಿ ಪುನರುಚ್ಚರಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.