
ಬೆಂಗಳೂರು, 29 ಜುಲೈ (ಹಿ.ಸ.):
ಆ್ಯಂಕರ್:
ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ತಲೆದೋರಿರುವ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಬಣ ರಾಜಕಾರಣ ದೊಡ್ಡ ಪಕ್ಷಗಳಲ್ಲಿ ಸಹಜ ಪ್ರಕ್ರಿಯೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.
ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 'ಸಂಘಟನ ಸೃಜನ ಅಭಿಯಾನ' ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಸಂದರ್ಭಗಳಲ್ಲೇ ಯಾರಿಗೆ ಅಸಮಾಧಾನ ಅಥವಾ ನೋವು ಇದೆ ಎಂಬುದು ತಿಳಿಯುತ್ತದೆ. ಸಮಸ್ಯೆಗಳನ್ನು ಗುರುತಿಸಿ ಸೂಕ್ತ ರಾಜಕೀಯ ಪರಿಹಾರ ಕಂಡುಕೊಳ್ಳಲು ಇದು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ದೇಶಾದ್ಯಂತ 'ಸಂಘಟನ ಸೃಜನ ಅಭಿಯಾನ' ಆರಂಭಿಸಲಾಗಿದ್ದು, ಭೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸುವ ಹಾಗೂ ನೂತನ ಜಿಲ್ಲಾಧ್ಯಕ್ಷರ ಆಯ್ಕೆಗಾಗಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII