ಕಾಫಿ ತೋಟದಲ್ಲಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
ಕೊಡಗು, 29 ಜುಲೈ (ಹಿ.ಸ.) ಆ್ಯಂಕರ್: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಸಮೀಪದ ಟಾಟಾ ಕಾಫಿ ತೋಟದಲ್ಲಿ ಸಂಭವಿಸಿದ ದುರಂತದಲ್ಲಿ, ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾದಪುರ ಸಮೀಪದ ಬಿಳಿಗೇರಿ
ಸಂದರ್ಭಿಕ ಚಿತ್ರ


ಕೊಡಗು, 29 ಜುಲೈ (ಹಿ.ಸ.)

ಆ್ಯಂಕರ್:

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಸಮೀಪದ ಟಾಟಾ ಕಾಫಿ ತೋಟದಲ್ಲಿ ಸಂಭವಿಸಿದ ದುರಂತದಲ್ಲಿ, ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಾದಪುರ ಸಮೀಪದ ಬಿಳಿಗೇರಿ ಎಸ್ಟೇಟ್ನಲ್ಲಿ ಎಂದಿನಂತೆ ಕಾರ್ಮಿಕರು ಕೃಷಿ ಕೆಲಸದಲ್ಲಿ ನಿರತರಾಗಿದ್ದಾಗ ಭಾರಿ ಗಾಳಿ ಮಳೆಗೆ ದೈತ್ಯ ಮರವೊಂದು ಉರುಳಿಬಿದ್ದಿದೆ. ಅಸ್ಸಾಂ ಮೂಲದ ಪರ್ಬಿನಾ ಖಾತುನ್ (29) ಹಾಗೂ ಅಲೆಮನ್ (48) ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಇವರೊಂದಿಗೆ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೋಮವಾರಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸ್ಥಳೀಯ ತಹಶೀಲ್ದಾರ್ ಅವರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande