ಹೇಮಾವತಿ ಜಲಾಶಯದ ನೀರಿನ ಮಟ್ಟ ಕುಸಿತ: ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಶಾಸಕ ವಿ. ಸುನಿಲ್ ಕುಮಾರ್ ವಾಗ್ದಾಳಿ!
ಹಾಸನ, 29 ಜುಲೈ (ಹಿ.ಸ.): ಆ್ಯಂಕರ್: ಹಾಸನ ಜಿಲ್ಲೆಯಾದ್ಯಂತ ಆವರಿಸಿರುವ ಭೀಕರ ಮಳೆಯ ಕೊರತೆ ಹಾಗೂ ಬರ ಪರಿಸ್ಥಿತಿಯ ವಾಸ್ತವಿಕತೆಯನ್ನು ಅರಿಯಲು ಗೋರೂರಿನ ಹೇಮಾವತಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಿಜೆಪಿ ಬರ ಅಧ್ಯಯನ ತಂಡದ ಮುಖಂಡ ಹಾಗೂ ಶಾಸಕ ವಿ. ಸುನಿಲ್ ಕುಮಾರ್, ರಾಜ್ಯ ಕಾಂಗ್ರೆಸ್ ಸರ
ಸಂದರ್ಭಿಕ ಚಿತ್ರ


ಹಾಸನ, 29 ಜುಲೈ (ಹಿ.ಸ.):

ಆ್ಯಂಕರ್:

ಹಾಸನ ಜಿಲ್ಲೆಯಾದ್ಯಂತ ಆವರಿಸಿರುವ ಭೀಕರ ಮಳೆಯ ಕೊರತೆ ಹಾಗೂ ಬರ ಪರಿಸ್ಥಿತಿಯ ವಾಸ್ತವಿಕತೆಯನ್ನು ಅರಿಯಲು ಗೋರೂರಿನ ಹೇಮಾವತಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಿಜೆಪಿ ಬರ ಅಧ್ಯಯನ ತಂಡದ ಮುಖಂಡ ಹಾಗೂ ಶಾಸಕ ವಿ. ಸುನಿಲ್ ಕುಮಾರ್, ರಾಜ್ಯ ಕಾಂಗ್ರೆಸ್ ಸರ್ಕಾರದ ಮಳೆ ಮತ್ತು ನೀರಾವರಿ ನಿರ್ವಹಣೆಯ ವೈಫಲ್ಯದ ವಿರುದ್ಧ ಕಿಡಿಕಾರಿದ್ದಾರೆ.

ಜಲಾಶಯದ ಪ್ರಸ್ತುತ ಸ್ಥಿತಿಯನ್ನು ಕಣ್ಣಾರೆ ಕಂಡು ಆತಂಕ ವ್ಯಕ್ತಪಡಿಸಿದ ಅವರು, ಹೇಮಾವತಿ ಜಲಾಶಯ ನಿರ್ಮಾಣವಾದಾಗಿನಿಂದ ಇತಿಹಾಸದಲ್ಲೇ ಇಷ್ಟು ಕಡಿಮೆ ಒಳಹರಿವು ದಾಖಲಾಗಿರುವುದು ಇದೇ ಮೊದಲು ಎಂದು ಆತಂಕ ವ್ಯೆಕ್ತಪಡಿಸಿದ್ದಾರೆ.

ಡ್ಯಾಮ್ನಲ್ಲಿ ನೀರಿಲ್ಲ, ಆದರೂ ತಮಿಳುನಾಡಿಗೆ ನೀರು ಬಿಡುವ ಹುಚ್ಚಾಟ!

ಜಲಾಶಯದ ನೀರಿನ ಸಂಗ್ರಹದ ಅಂಕಿ ಅಂಶಗಳನ್ನು ಬಿಚ್ಚಿಟ್ಟ ಸುನಿಲ್ ಕುಮಾರ್, ಹೇಮಾವತಿ ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 37 ಟಿಎಂಸಿ (29.22 ಅಡಿ) ಇದ್ದು, ಪ್ರಸ್ತುತ ಕೇವಲ 24 ಟಿಎಂಸಿ ನೀರು ಮಾತ್ರ ಉಳಿದುಕೊಂಡಿದೆ. ಇಂತಹ ಕಠಿಣ ಸಂಕಷ್ಟದ ಪರಿಸ್ಥಿತಿಯಲ್ಲಿ ಸ್ಥಳೀಯ ಜನರಿಗೆ ಕುಡಿಯುವ ನೀರಿಗೂ ಗತಿ ಇಲ್ಲದಂತಾಗಿದೆ. ಇಂತಹ ದುಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಎಂದು ಆದೇಶಿಸುತ್ತಿರುವುದು ಸಂಪೂರ್ಣವಾಗಿ ರೈತ ವಿರೋಧಿ ಹಾಗೂ ರಾಜ್ಯದ ಹಿತಾಸಕ್ತಿಗೆ ಮಾರಕವಾದ ಕ್ರಮ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಕ್ಕಾಗಿ ಕಿತ್ತಾಟ, ರಾಜ್ಯದಲ್ಲಿ ಅನಾಥ ಪ್ರಜ್ಞೆ!

ರಾಜ್ಯ ಸರ್ಕಾರದ ಆಡಳಿತ ಯಂತ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾಸಕರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೇವಲ ಮಂತ್ರಿ ಮಂಡಳ ರಚನೆ ಮತ್ತು ಆಂತರಿಕ ಅಧಿಕಾರ ರಾಜಕಾರಣಕ್ಕಾಗಿ ಮಾತ್ರ ಓಡಾಡುತ್ತಿದೆ ವಿನಃ ಅನ್ನದಾತ ರೈತರ ಸಂಕಷ್ಟದ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ದೂರಿದರು.

ರಾಜ್ಯದಲ್ಲಿ ಸಮರ್ಥ ಕೃಷಿ ಸಚಿವರೂ ಇಲ್ಲ, ತೋಟಗಾರಿಕೆ ಸಚಿವರೂ ಸರಿಯಾಗಿ ಸ್ಪಂದಿಸುತ್ತಿಲ್ಲ, ಇಲಾಖೆಯನ್ನು ನೋಡಿಕೊಳ್ಳುತ್ತಿರುವ ಸಚಿವರಿಗೆ ನೀರಾವರಿ ಕ್ಷೇತ್ರದ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ.

ಇಂತಹ ಆಡಳಿತ ವೈಫಲ್ಯದಿಂದಾಗಿ ಇಂದು ಇಡೀ ಕರ್ನಾಟಕ ರಾಜ್ಯವು ಅನಾಥ ಪ್ರಜ್ಞೆಯನ್ನು ಎದುರಿಸುವಂತಾಗಿದೆ ಎಂದು ಟೀಕಿಸಿದರು.

ಮುಖ್ಯಮಂತ್ರಿಗಳು ದಿಢೀರ್ ಸ್ಥಳ ಅಧ್ಯಯನ ನಡೆಸಿ ಗಟ್ಟಿತನದ ನಿರ್ಧಾರ ಕೈಗೊಳ್ಳಲಿ

ಸಂಕಷ್ಟದಿಂದ ತತ್ತರಿಸಿರುವ ರೈತರಿಗೆ ಧೈರ್ಯ ತುಂಬಲು ಮುಖ್ಯಮಂತ್ರಿಗಳು ತಕ್ಷಣವೇ ಕಾವೇರಿ ಕೊಳ್ಳದ ಎಲ್ಲಾ ಜಲಾಶಯಗಳಿಗೆ ಖುದ್ದು ಭೇಟಿ ನೀಡಿ ಸ್ಥಳ ಅಧ್ಯಯನ ನಡೆಸಬೇಕು ಎಂದು ಸುನಿಲ್ ಕುಮಾರ್ ಒತ್ತಾಯಿಸಿದರು.

ಜಲಾಶಯಗಳ ವಾಸ್ತವಿಕ ಸ್ಥಿತಿಯನ್ನು ಅರ್ಥ ಮಾಡಿಕೊಂಡು ಸರ್ಕಾರ ಕೂಡಲೇ ಗಟ್ಟಿ ನಿರ್ಧಾರವನ್ನು ಕೈಗೊಳ್ಳಬೇಕು. ರೈತರಿಗೆ ಆತ್ಮವಿಶ್ವಾಸ ತುಂಬುವ ಹಾಗೂ ಸಮರೋಪಾದಿಯಲ್ಲಿ ಅಗತ್ಯ ಬರ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande