ಅಮರನಾಥ ಯಾತ್ರೆ ಸನಾತನ ಸಂಸ್ಕೃತಿಯ ಭಕ್ತಿ ಮತ್ತು ಧೈರ್ಯದ ಸಂಕೇತ: ಅಮಿತ್ ಶಾ
ನವದೆಹಲಿ, 03 ಜುಲೈ (ಹಿ.ಸ.): ಆ್ಯಂಕರ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪವಿತ್ರ ಅಮರನಾಥ ಯಾತ್ರೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಭಕ್ತರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಅಮರನಾಥ ಯಾತ್ರೆಯು ಸನಾತನ ಸಂಸ್ಕೃತಿಯ
ಅಮಿತ್ ಶಾ


ನವದೆಹಲಿ, 03 ಜುಲೈ (ಹಿ.ಸ.):

ಆ್ಯಂಕರ್:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪವಿತ್ರ ಅಮರನಾಥ ಯಾತ್ರೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಭಕ್ತರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಅಮರನಾಥ ಯಾತ್ರೆಯು ಸನಾತನ ಸಂಸ್ಕೃತಿಯ ಮೇಲಿನ ಅಚಲ ಭಕ್ತಿ, ಅಡಿಗ ಧೈರ್ಯ, ಸಂಯಮ ಮತ್ತು ಎಂದಿಗೂ ಸೋಲೊಪ್ಪದ ಜೀವಟತನದ ಪವಿತ್ರ ಪ್ರತೀಕವಾಗಿದೆ ಎಂದು ಹೇಳಿದ್ದಾರೆ.

ಈ ಪವಿತ್ರ ಯಾತ್ರೆಯಲ್ಲಿ ಭಾಗವಹಿಸಿ ಬಾಬಾ ಬರ್ಫಾನಿಯ ದರ್ಶನ ಪಡೆಯಲು ತೆರಳುತ್ತಿರುವ ಎಲ್ಲಾ ಭಕ್ತಾದಿಗಳಿಗೆ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಯಾತ್ರಾರ್ಥಿಗಳ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಸಮಗ್ರ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ತಿಳಿಸಿರುವ ಅಮಿತ್ ಶಾ, ಸಂಪೂರ್ಣ ಯಾತ್ರಾ ಮಾರ್ಗದಲ್ಲಿ ಬಹುಹಂತದ ಭದ್ರತಾ ವ್ಯವಸ್ಥೆ, ಕ್ಯೂಆರ್ ಕೋಡ್ ಆಧಾರಿತ ನೋಂದಣಿ, ಯಾತ್ರಿಕರ ವಸತಿ, ಆರೋಗ್ಯ ಸೇವೆಗಳು ಹಾಗೂ ವಿಪತ್ತು ನಿರ್ವಹಣೆಗೆ ಅಗತ್ಯವಿರುವ ಬಲಿಷ್ಠ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರತಿಯೊಬ್ಬ ಭಕ್ತರ ಯಾತ್ರೆ ಸುರಕ್ಷಿತ, ಸುಗಮ ಮತ್ತು ಸುಖಕರವಾಗಿರಲೆಂದು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande