ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಎಸ್ಪಿ ಸಿದ್ಧಾರ್ಥ ಗೋಯಲ್ ಪ್ರಶಂಸನಾ ಪತ್ರ ವಿತರಣೆ
ಬಾಗಲಕೋಟೆ, 03 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ನವನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಕವಾಯತು ಮೈದಾನದಲ್ಲಿ ಇಂದು ಮುಂಜಾನೆ ವಾರದ ಕವಾಯತು ಶಿಸ್ತಿನ ಹಾಗೂ ಗೌರವಯುತ ವಾತಾವರಣದಲ್ಲಿ ನಡೆಯಿತು. ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಿಸ್ತಿನ ಹೆಜ್ಜೆ, ದೈಹಿಕ ಸಾಮರ್ಥ್ಯ ಮತ್ತ
ಪ್ರಶಸ್ತಿ


ಬಾಗಲಕೋಟೆ, 03 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ನವನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಕವಾಯತು ಮೈದಾನದಲ್ಲಿ ಇಂದು ಮುಂಜಾನೆ ವಾರದ ಕವಾಯತು ಶಿಸ್ತಿನ ಹಾಗೂ ಗೌರವಯುತ ವಾತಾವರಣದಲ್ಲಿ ನಡೆಯಿತು. ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಿಸ್ತಿನ ಹೆಜ್ಜೆ, ದೈಹಿಕ ಸಾಮರ್ಥ್ಯ ಮತ್ತು ವೃತ್ತಿಪರ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿ ಕವಾಯತಿನಲ್ಲಿ ಭಾಗವಹಿಸಿದರು.

ವಾರದ ಕವಾಯತು ಪೂರ್ಣಗೊಂಡ ಬಳಿಕ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸೇವೆ, ಕರ್ತವ್ಯನಿಷ್ಠೆ ಹಾಗೂ ಕಾರ್ಯಕ್ಷಮತೆಯನ್ನು ತೋರಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ, ಬಾಗಲಕೋಟೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿದ್ಧಾರ್ಥ ಗೋಯಲ್ ಅವರು ಪ್ರಶಂಸನಾ ಪತ್ರಗಳನ್ನು ವಿತರಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್ಪಿ ಸಿದ್ಧಾರ್ಥ ಗೋಯಲ್ ಅವರು, ಪೊಲೀಸ್ ಇಲಾಖೆಯಲ್ಲಿ ಶಿಸ್ತು, ಸಮಯಪಾಲನೆ, ಪ್ರಾಮಾಣಿಕ ಸೇವೆ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಅತ್ಯಂತ ಮಹತ್ವದ್ದಾಗಿದೆ. ಉತ್ತಮ ಕಾರ್ಯನಿರ್ವಹಣೆ ತೋರಿದ ಸಿಬ್ಬಂದಿಯನ್ನು ಗೌರವಿಸುವುದು ಇತರರಿಗೂ ಪ್ರೇರಣೆಯಾಗುತ್ತದೆ ಎಂದು ಹೇಳಿದರು

ಪ್ರಶಂಸನಾ ಪತ್ರ ಸ್ವೀಕರಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಕರ್ತವ್ಯವನ್ನು ಇನ್ನಷ್ಟು ಜವಾಬ್ದಾರಿಯಿಂದ ನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು. ವಾರದ ಕವಾಯತು ಪೊಲೀಸ್ ಪಡೆಗಳ ದೈಹಿಕ ಸಾಮರ್ಥ್ಯ, ಮಾನಸಿಕ ದೃಢತೆ ಹಾಗೂ ಶಿಸ್ತನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಇಂತಹ ಕಾರ್ಯಕ್ರಮಗಳು ಸಿಬ್ಬಂದಿಯಲ್ಲಿ ಸೇವಾ ಮನೋಭಾವ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಡಿಎಆರ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande