ಬಳ್ಳಾರಿ ನಗರ ಜೆಸ್ಕಾಂ ಜು.05 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ, 03 ಜುಲೈ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-25 ಹಾಗೂ ಎಫ್-46 ಫೀಡರ್ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿಯನ್ನು ಜುಲೈ 05 ರಂದು ಬೆಳಿಗ್ಗೆ 09 ರಿಂದ ಸಂಜೆ 06
ಬಳ್ಳಾರಿ ನಗರ ಜೆಸ್ಕಾಂ ಜು.05 ರಂದು ವಿದ್ಯುತ್ ವ್ಯತ್ಯಯ


ಬಳ್ಳಾರಿ, 03 ಜುಲೈ (ಹಿ.ಸ.)

ಆ್ಯಂಕರ್: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-25 ಹಾಗೂ ಎಫ್-46 ಫೀಡರ್ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿಯನ್ನು ಜುಲೈ 05 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ನಡೆಸುವ ಕಾರಣ ಈ ವ್ಯಾಪ್ತಿಯಲ್ಲಿ

ವಿದ್ಯುತ್ ವ್ಯತ್ಯಯವಾಗಲಿದೆ.

ಆರ್.ಕೆ ಮಿಲ್ ರೋಡ್, ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟ್ಯಾಂಡ್, ದೊಡ್ಡ ಹಾಗೂ ಸಣ್ಣ ಮಾರ್ಕೆಟ್, ಕಾರ್ಕಳ ತೋಟ, ಸಾಯಿ ಕಾಲೋನಿ, ಆರ್.ಆರ್. ಲೇಔಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಇಂಡಸ್ಟ್ರಿಯಲ್ ಏರಿಯಾ ಹಂತ-1 ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande