ಬಳ್ಳಾರಿ : ಪಲ್ಸ್ ಪೋಲಿಯೋ ಶೇ. 101.2 ರಷ್ಟು ಪ್ರಗತಿ
ಬಳ್ಳಾರಿ, 03 ಜುಲೈ (ಹಿ.ಸ.) ಆ್ಯಂಕರ್: ರಾಷ್ಟಿಯ ಪಲ್ಸ್ ಪೋಲಿಯೋ ಅಭಿಯಾನದಡಿ ಬಳ್ಳಾರಿ ಜಿಲ್ಲೆಯು ಅತ್ಯುತ್ತಮ ಸಾಧನೆ ಮಾಡಿದ್ದು, ಶೇಕಡಾ 101.2 ರಷ್ಟು ಪ್ರಗತಿ ಸಾಧಿಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ತಿಳಿಸಿದ್ದಾರೆ. ಜೂನ್ 28 ರಿಂದ ಜುಲೈ 1 ರ
ಬಳ್ಳಾರಿ : ಪಲ್ಸ್ ಪೋಲಿಯೋ ಶೇ. 101.2 ರಷ್ಟು ಪ್ರಗತಿ


ಬಳ್ಳಾರಿ, 03 ಜುಲೈ (ಹಿ.ಸ.)

ಆ್ಯಂಕರ್: ರಾಷ್ಟಿಯ ಪಲ್ಸ್ ಪೋಲಿಯೋ ಅಭಿಯಾನದಡಿ ಬಳ್ಳಾರಿ ಜಿಲ್ಲೆಯು ಅತ್ಯುತ್ತಮ ಸಾಧನೆ ಮಾಡಿದ್ದು, ಶೇಕಡಾ 101.2 ರಷ್ಟು ಪ್ರಗತಿ ಸಾಧಿಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ತಿಳಿಸಿದ್ದಾರೆ.

ಜೂನ್ 28 ರಿಂದ ಜುಲೈ 1 ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆದ ಈ ಅಭಿಯಾನದಲ್ಲಿ ಜಿಲ್ಲೆಯ 5 ವರ್ಷದೊಳಗಿನ ಒಟ್ಟು 1,99,934 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.

ಆದರೆ, ಜಿಲ್ಲಾಡಳಿತದ ಸಕ್ರಿಯ ಪ್ರೋತ್ಸಾಹ ಹಾಗೂ ಆರೋಗ್ಯ ಇಲಾಖೆಯ ನಿರಂತರ ಶ್ರಮದಿಂದಾಗಿ ಒಟ್ಟು 2,02,387 ಮಕ್ಕಳಿಗೆ ಯಶಸ್ವಿಯಾಗಿ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಈ ಮಹತ್ತರ ಸಾಧನೆ ಮಾಡಲಾಗಿದೆ. ಬಳ್ಳಾರಿ, ಸಂಡೂರು, ಸಿರುಗುಪ್ಪ, ಕುರುಗೋಡು ಮತ್ತು ಕಂಪ್ಲಿ ತಾಲೂಕುಗಳಲ್ಲಿ ಈ ಅಭಿಯಾನ ಅತ್ಯಂತ ಯಶಸ್ವಿಯಾಗಿ ನಡೆದಿದೆ.

ಬಳ್ಳಾರಿ ತಾಲೂಕು: 95,879 ಗುರಿ, 96,741 ಮಕ್ಕಳಿಗೆ ಲಸಿಕೆ (ಶೇ. 100.9 ಪ್ರಗತಿ).

ಕಂಪ್ಲಿ ತಾಲೂಕು: 14,627 ಗುರಿ, 15,368 ಮಕ್ಕಳಿಗೆ ಲಸಿಕೆ (ಶೇ. 105.1 ಪ್ರಗತಿ).

ಕುರುಗೋಡು ತಾಲೂಕು: 17,241 ಗುರಿ, 17,483 ಮಕ್ಕಳಿಗೆ ಲಸಿಕೆ (ಶೇ. 101.4 ಪ್ರಗತಿ).

ಸಂಡೂರು ತಾಲೂಕು: 35,818 ಗುರಿ, 36,363 ಮಕ್ಕಳಿಗೆ ಲಸಿಕೆ (ಶೇ. 101.5 ಪ್ರಗತಿ).

ಸಿರುಗುಪ್ಪ ತಾಲೂಕು: 36,369 ಗುರಿ, 36,432 ಮಕ್ಕಳಿಗೆ ಲಸಿಕೆ (ಶೇ. 100.2 ಪ್ರಗತಿ).

ಎಲ್ಲಾ ಮಕ್ಕಳಿಗೂ ಲಸಿಕೆ ತಲುಪಿಸುವ ದಿಸೆಯಲ್ಲಿ ಜಿಲ್ಲಾದ್ಯಂತ 335 ಕ್ಲಿಷ್ಟಕರ ಪ್ರದೇಶಗಳನ್ನು ಗುರುತಿಸಲಾಗಿತ್ತು. ಇಂತಹ ಸ್ಥಳಗಳಲ್ಲಿ ಲಸಿಕೆ ನೀಡಲು 236 ವಿಶೇಷ ತಂಡಗಳನ್ನು ಸಿದ್ಧಗೊಳಿಸಲಾಗಿತ್ತು. ಒಟ್ಟಾರೆಯಾಗಿ 977 ಪೋಲಿಯೋ ಬೂತ್ಗಳು ಹಾಗೂ 615 ಮನೆ ಭೇಟಿ ತಂಡಗಳು ಕಾರ್ಯನಿರ್ವಹಿಸಿದವು ಎಂದು ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಹೆಚ್ಚು ಸೇರುವ ಸಂತೆ, ಮಾರುಕಟ್ಟೆ, ಬಸ್ ನಿಲ್ದಾಣ ಮುಂತಾದ ಸ್ಥಳಗಳಲ್ಲಿ ಲಸಿಕೆ ಹಾಕಲು 50 ತಂಡಗಳನ್ನು ನಿಯೋಜಿಸಲಾಗಿತ್ತು. ಇದರೊಂದಿಗೆ ವಲಸೆ ಪ್ರದೇಶಗಳಾದ ಇಟ್ಟಿಗೆ ಭಟ್ಟಿ, ಕಟ್ಟಡ ಕಾಮಗಾರಿ ಪ್ರದೇಶ, ಕಬ್ಬು ಕಡಿಯುವ ಸ್ಥಳಗಳು ಮತ್ತು ಕುರಿಹಟ್ಟಿ ಮುಂತಾದ ಕಡೆಗಳಲ್ಲಿ ಲಸಿಕೆ ತಲುಪಿಸಲು 15 ಸಂಚಾರಿ (ಮೊಬೈಲ್) ತಂಡಗಳ ಮೂಲಕ ಯಶಸ್ವಿ ಸಾಧನೆ ಮಾಡಲಾಗಿದೆ.

ಈ ಬೃಹತ್ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯೊ0ದಿಗೆ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ವ್ಯಾಕ್ಸಿನೇಟರ್ಗಳಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಮೇಲ್ವಿಚಾರಣೆಗಾಗಿ 188 ಮೇಲ್ವಿಚಾರಕರು ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ನೋಡಲ್ ಅಧಿಕಾರಿಗಳಾಗಿ ಶ್ರಮಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande