ವಿಜಯಪುರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ
ವಿಜಯಪುರ, 03 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲಾ ಮಟ್ಟದ ವಿವಿಧ ಅಭಿವೃದ್ಧಿ ಯೋಜನೆಗಳು, ಜನಪರ ಕಾರ್ಯಕ್ರಮಗಳು ಹಾಗೂ ಇಲಾಖಾವಾರು ಕಾಮಗಾರಿಗಳ ಪ್ರಗತಿ ಕುರಿತು ಮಹತ್ವದ ಪರಿಶೀಲನಾ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೈಗಾರಿಕಾಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಗಾರಿಕೆ ಮತ್ತ
ಸಭೆ


ವಿಜಯಪುರ, 03 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲಾ ಮಟ್ಟದ ವಿವಿಧ ಅಭಿವೃದ್ಧಿ ಯೋಜನೆಗಳು, ಜನಪರ ಕಾರ್ಯಕ್ರಮಗಳು ಹಾಗೂ ಇಲಾಖಾವಾರು ಕಾಮಗಾರಿಗಳ ಪ್ರಗತಿ ಕುರಿತು ಮಹತ್ವದ ಪರಿಶೀಲನಾ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಕೈಗಾರಿಕಾಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿಗಳಾದ ಶ್ರೀಮತಿ ಖುಷ್ಬೂ ಗೋಯಲ್ ಚೌಧರಿ ವಹಿಸಿದ್ದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಅನುಷ್ಠಾನ, ಸಾರ್ವಜನಿಕ ಸೇವೆಗಳ ಗುಣಮಟ್ಟ, ಬಾಕಿ ಉಳಿದಿರುವ ಕಾಮಗಾರಿಗಳ ಪ್ರಗತಿ ಹಾಗೂ ಅವುಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳ ಜೊತೆಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಈ ಜನಸಾಮಾನ್ಯರಿಗೆ ತ್ವರಿತ ಮತ್ತು ಪರಿಣಾಮಕಾರಿ ಸೇವೆ ಒದಗಿಸುವ ನಿಟ್ಟಿನಲ್ಲಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿಷೇಕ ಸಹೆರಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದು, ತಮ್ಮ ಇಲಾಖೆಗಳ ಪ್ರಗತಿ ವರದಿಯನ್ನು ಮಂಡಿಸಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಿ, ಸಾರ್ವಜನಿಕರಿಗೆ ಉತ್ತಮ ಆಡಳಿತ ಹಾಗೂ ಗುಣಮಟ್ಟದ ಸೇವೆಗಳನ್ನು ಒದಗಿಸಲು ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕೆಂದು ಸಭೆಯಲ್ಲಿ ಒತ್ತಿ ಹೇಳಲಾಯಿತು. ಸಭೆಯು ವಿವಿಧ ಇಲಾಖೆಗಳ ಕಾರ್ಯಕ್ಷಮತೆ ಮೌಲ್ಯಮಾಪನ ಹಾಗೂ ಮುಂದಿನ ಕಾರ್ಯಯೋಜನೆ ರೂಪಿಸುವ ನಿಟ್ಟಿನಲ್ಲಿ ಮಹತ್ವದ ವೇದಿಕೆಯಾಗಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande