ಎಸ್ ಐ ಆರ್- ಮಾನ್ವಿ, ಸಿರವಾರ ಬ್ಲಾಕ್ ಕಾಂಗ್ರೆಸ್ : ಬಿಎಲ್ಎಗಳಿಗೆ ತರಬೇತಿ
ರಾಯಚೂರು, 03 ಜುಲೈ (ಹಿ.ಸ.) ಆ್ಯಂಕರ್: ಪ್ರಜಾಪ್ರಭುತ್ವದ ಯಶಸ್ಸಿಗೆ ನಿಖರ ಮತದಾರರ ಪಟ್ಟಿ ಅತ್ಯಂತ ಅಗತ್ಯವಾಗಿದೆ. ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಬಿಎಲ್ಎಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಮತದಾರರ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಅಗತ್ಯ ದಾಖಲ
ಎಸ್ ಐ ಆರ್- ಮಾನ್ವಿ, ಸಿರವಾರ ಬ್ಲಾಕ್ ಕಾಂಗ್ರೆಸ್ : ಬಿಎಲ್ಎಗಳಿಗೆ ತರಬೇತಿ


ರಾಯಚೂರು, 03 ಜುಲೈ (ಹಿ.ಸ.)

ಆ್ಯಂಕರ್: ಪ್ರಜಾಪ್ರಭುತ್ವದ ಯಶಸ್ಸಿಗೆ ನಿಖರ ಮತದಾರರ ಪಟ್ಟಿ ಅತ್ಯಂತ ಅಗತ್ಯವಾಗಿದೆ. ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಬಿಎಲ್ಎಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.

ಮತದಾರರ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಭರ್ತಿ ಮಾಡಲು ಸಾರ್ವಜನಿಕರಿಗೆ ಬಿಎಲ್ ಎ ಗಳು ಸಹಕಾರ ನೀಡಬೇಕು. ಎಸ್ಐಆರ್ ಪ್ರಕ್ರಿಯೆಯಲ್ಲಿ ಜವಾಬ್ದಾರಿಯಿಂದ ಭಾಗವಹಿಸದಿದ್ದರೆ ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎಂದು ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯರಾದ ಎನ್ಎಸ್ ಬೋಸರಾಜಯ ಅವರು ಕಳವಳ ವ್ಯಕ್ತಪಡಿಸಿದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಮನ್ವಿ ಪಟ್ಟಣದ ಖಾದ್ರಿ ಫಂಕ್ಷನ್ ಹಾಲ್ನಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯ್ತಿ, ತಾಲೂಕ ಪಂಚಾಯ್ತಿ ಹಾಗೂ ಬೂತ್ ಮಟ್ಟದ ಏಜೆಂಟರು (ಬಿಎಲ್ಎ) 2 ಗಳಿಗೆ ತರಬೇತಿ ಕಾರ್ಯಗಾರದಲ್ಲಿ ರಾಯಚೂರು ಲೋಕಸಭಾ ಸದಸ್ಯರಾದ ಜಿ ಕುಮಾರ ನಾಯಕ,ಶಾಸಕರಾದ ಹಂಪಯ್ಯ ನಾಯಕ ಅವರು ಭಾಗವಹಿಸಿ ಮಾಹಿತಿ ನೀಡಿದರು.

ನಂತರ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದರಾದ ಜಿ ಕುಮಾರ ನಾಯಕ, ಶಾಸಕ ಹಂಪಯ್ಯ ನಾಯಕ ಅವರು ಮಾತನಾಡಿ, ಎಸ್ ಐ ಅರ್ ಎನ್ನುವದು ಒಂದುರಿತಿಯಾ ನೋಟು ಅಮಾನ್ಯೀಕರಣದಂತೆ, ನಮ್ಮ ಹಣವನ್ನು ಬ್ಯಾಂಕ್ ಗೆ ಕಟ್ಟಿ ಸರದಿ ಸಾಲಿನಲ್ಲಿ ನಿಂತು ನಮ್ಮ ಹಣವನ್ನು ನಾವು ಬಿಡಿಸಿಕೊಂಡಂತಾಗಿದೆ. ಕಷ್ಟವಾದರೂ ಪರವಾಗಿಲ್ಲ ನಾವು ನಮ್ಮ ಎಲ್ಲ ದಾಖಲೆಗಳೊಂದಿಗೆ ಪ್ರಕ್ರಿಯೆಯಲ್ಲಿ ಭಾಗವಹೀಸಿ ಪ್ರಜಾಪ್ರಭುತ್ವ ಉಳಿಸಲು ಎಸ್ ಐ ಆರ್ ನಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಮಹತ್ವ, ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ ಹಾಗೂ ಹೆಸರು ತೆಗೆದುಹಾಕುವ ಕುರಿತು ವಿವರವಾದ ಮಾಹಿತಿ ನೀಡಿದರು.

ಎಸ್ಐಆರ್ ಪರಿಷ್ಕರಣೆ ಕಾರ್ಯದಲ್ಲಿ ಪ್ರತಿಯೊಬ್ಬ ಬಿಎಲ್ಎ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಗುರುತಿಸಿ ಸರಿಪಡಿಸಲು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು. ಯುವ ಮತದಾರರು, ಮಹಿಳೆಯರು ಹಾಗೂ ಹೊಸದಾಗಿ ಅರ್ಹತೆ ಪಡೆದ ಮತದಾರರ ಹೆಸರುಗಳನ್ನು ಪಟ್ಟಿಗೆ ಸೇರಿಸಲು ವಿಶೇಷ ಗಮನ ಹರಿಸಬೇಕು ಎಂದು ಕರೆ ನೀಡಿದರು.

ತರಬೇತಿ ಕಾರ್ಯಾಗಾರದಲ್ಲಿ ಎಸ್ಐಆರ್ಗೆ ಸಂಬಂಧಿಸಿದ ಅರ್ಜಿ ನಮೂನೆಗಳ ಭರ್ತಿ, ದಾಖಲೆಗಳ ಪರಿಶೀಲನೆ, ಆನ್ಲೈನ್ ಹಾಗೂ ಆಫ್ಲೈನ್ ಪ್ರಕ್ರಿಯೆಗಳ ಕುರಿತು ಜಿಶಾನ್ ಅಲಿ ಸಿದ್ಧಿಕಿ ಅವರು ಮಾಹಿತಿ ನೀಡಿದರು.

ಮತದಾರ ಪಟ್ಟಿ ಪರಿಷ್ಕರಣೆಯಲ್ಲಿ 100 ಪ್ರತಿಷತ ಸಂಪೂರ್ಣ ನೊಂದಣಿ ಮಾಡಿದವರಿಗೆ ಬಹುಮಾನ ನೀಡಲಾಗುವುದು ಎಂದು ಎನ್ಎಸ್ ಬೋಸರಾಜು ಅವರು ಘೋಷಿಸಿದರು.

ಕಾರ್ಯಾಗಾರದಲ್ಲಿ ಕೆಪಿಸಿಸಿ ಉಪಾದ್ಯಕ್ಷರಾದ ಡಿಎಸ್ ಹುಲಗೇರಿ, ಕೆಪಿಸಿಸಿ ಜನರಲ್ ಸೆಕ್ರೆಟ್ರಗಳಾದ ಕೆ ಶಾಂತಪ್ಪ, ರಾಮಣ್ಣ ಇರಬಗೇರಾ, ಮೊಹ್ಮದ್ ಶಾಲಂ, ಸೂಗಪ್ಪ ಸಾಹುಕಾರ, ಜಯಣ್ಣ, ಅಬ್ದುಲ್ ಗಫೂರ್ ಸಾಬ್, ಸಿರವಾರ ಬ್ಲಾಕ್ ಅದ್ಯಕ್ಷರಾದ ಚುಕ್ಕಿ, ಅಮರೇಗೌಡ ಹಂಚಿನಾಳ, ಶಿವಕುಮಾರ, ರೇಣುಕಾ ಸಿರವಾರ, ವಿಜಯ ಲಕ್ಷ್ಮಿ, ಕುರ್ಡಿ ಚಂದ್ರ ಶೇಖರ್, ಜಯವಂತರಾವ್ ಪತಂಗೆ, ಕಿರಲಿಂಗಪ್ಪ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಶಿವಣ್ಣ, ಖಾಲಿದ್ ಗುರು, ರೌಡೂರು ಮಾಹಾಂತೇಶ ಸ್ವಾಮಿ, ಅಮರೇಶಪ್ಪ, ತಿಪ್ಪಣ್ಣ ಬಾಗಲವಾಡ, ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಬಿಎಲ್ಎಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande