ಜನರ ಅಹವಾಲು ಆಲಿಸಿ ಪರಿಹಾರದ ಭರವಸೆ ನೀಡಿದ ಶಾಸಕ ಕಟಕದೊಂಡ
ವಿಜಯಪುರ, 03 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ ಶಾಸಕ ವಿಠಲ್ ಕಟಕದೊಂಡ ಅವರು ಶುಕ್ರವಾರ ವಿಜಯಪುರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿದರು. ಕ್ಷೇತ್ರದ ವಿವಿಧ ಗ್ರಾಮಗಳಿ
ಅಹವಾಲು


ವಿಜಯಪುರ, 03 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ

ನಾಗಠಾಣ ವಿಧಾನಸಭಾ ಕ್ಷೇತ್ರದ ಶಾಸಕ ವಿಠಲ್ ಕಟಕದೊಂಡ ಅವರು ಶುಕ್ರವಾರ ವಿಜಯಪುರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿದರು.

ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನಾಗರಿಕರು ಕುಡಿಯುವ ನೀರು, ರಸ್ತೆ, ವಿದ್ಯುತ್, ಪಿಂಚಣಿ, ವಸತಿ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳು ಹಾಗೂ ವೈಯಕ್ತಿಕ ಅರ್ಜಿಗಳನ್ನು ಶಾಸಕರ ಮುಂದಿಟ್ಟರು.

ಪ್ರತಿಯೊಬ್ಬರ ಅಹವಾಲನ್ನು ತಾಳ್ಮೆಯಿಂದ ಆಲಿಸಿದ ಶಾಸಕ ವಿಠಲ್ ಕಟಕದೊಂಡ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸಾಧ್ಯವಾದಷ್ಟು ಬೇಗ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚನೆ ನೀಡಿದರು.

ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಈ ವೇಳೆ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳು, ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿ, ಸರ್ಕಾರಿ ಯೋಜನೆಗಳ ಅನುಷ್ಠಾನ ಹಾಗೂ ಜನರ ಅಗತ್ಯಗಳಿಗೆ ಸ್ಪಂದಿಸುವ ಕುರಿತು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.

ಜನಪ್ರತಿನಿಧಿಯಾಗಿ ಸಾರ್ವಜನಿಕರಿಗೆ ಸದಾ ಲಭ್ಯವಿರುವುದು ತಮ್ಮ ಆದ್ಯ ಕರ್ತವ್ಯವಾಗಿದ್ದು, ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಲು ನಿರಂತರವಾಗಿ ಪ್ರಯತ್ನಿಸಲಾಗುವುದು ಎಂದು ಶಾಸಕರು ಹೇಳಿದರು.

ಗೃಹ ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರಿಗೆ ತಿಳಿಸಿ, ಸಮಸ್ಯೆಗಳಿಗೆ ಸ್ಪಂದಿಸಿದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande