ಬಳ್ಳಾರಿ: ಗ್ರಾಮ ಒನ್ ಖಾಲಿ ಫ್ರಾಂಚೈಸಿಗೆ ಆನ್ಲೈನ್ ಅರ್ಜಿ ಆಹ್ವಾನ
ಬಳ್ಳಾರಿ, 03 ಜುಲೈ (ಹಿ.ಸ.) ಆ್ಯಂಕರ್: ಜಿಲ್ಲಾದ್ಯಂತ ನಾಗರಿಕರಿಗೆ ಉತ್ತಮ ಸೇವೆಗಳನ್ನು ನೀಡುತ್ತಿರುವ ‘ಗ್ರಾಮ ಒನ್'' ಕೇಂದ್ರಗಳ ಪೈಕಿ, ಪ್ರಸ್ತುತ ಖಾಲಿ ಇರುವ ಗ್ರಾಮ ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿ
ಬಳ್ಳಾರಿ: ಗ್ರಾಮ ಒನ್ ಖಾಲಿ ಫ್ರಾಂಚೈಸಿಗೆ ಆನ್ಲೈನ್ ಅರ್ಜಿ ಆಹ್ವಾನ


ಬಳ್ಳಾರಿ, 03 ಜುಲೈ (ಹಿ.ಸ.)

ಆ್ಯಂಕರ್: ಜಿಲ್ಲಾದ್ಯಂತ ನಾಗರಿಕರಿಗೆ ಉತ್ತಮ ಸೇವೆಗಳನ್ನು ನೀಡುತ್ತಿರುವ ‘ಗ್ರಾಮ ಒನ್' ಕೇಂದ್ರಗಳ ಪೈಕಿ, ಪ್ರಸ್ತುತ ಖಾಲಿ ಇರುವ ಗ್ರಾಮ ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸರ್ಕಾರದ ಇ-ಆಡಳಿತ ಇಲಾಖೆಯ ಇಡಿಸಿಎಸ್ ನಿರ್ದೇಶನಾಲಯದ ಸೂಚನೆಯಂತೆ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲೆಗೆ ಒಟ್ಟು 177 ಗ್ರಾಮ ಒನ್ ಕೇಂದ್ರಗಳು ಮಂಜೂರಾಗಿದ್ದು, ಈ ಪೈಕಿ ಈಗಾಗಲೇ 167 ಕೇಂದ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ.

ಉಳಿದ ಕೇಂದ್ರಗಳ ಪೈಕಿ 09 ಕೇಂದ್ರಗಳಿಗೆ ಆನ್ಲೈನ್ ಮೂಲಕ ಸ್ವೀಕರಿಸಲಾದ ಅರ್ಜಿಗಳು ಸದ್ಯ ಪರಿಶೀಲನಾ ಹಂತದಲ್ಲಿದ್ದು, ಬಾಕಿ ಇರುವ 01 ಕೇಂದ್ರಕ್ಕೆ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ.

*ಖಾಲಿ ಇರುವ ಕೇಂದ್ರದ ವಿವರ:*

ಸಂಡೂರು ತಾಲ್ಲೂಕಿನ ನರಸಿಂಗಪುರ ಗ್ರಾಮ ಪಂಚಾಯಿತಿ.

ಖಾಲಿ ಇರುವ ಗ್ರಾಮ ಒನ್ ಕೇಂದ್ರದ ಸಂಪೂರ್ಣ ವಿವರಗಳನ್ನು https://sevasindhuservices.karnataka.gov.in/directApply.do?serviceld=2631 ವೆಬ್ಸೈಟ್ನಲ್ಲಿ ನೀಡಲಾಗಿದ್ದು, ಆಸಕ್ತರು ಅಧಿಕೃತ ಲಿಂಕ್ ಬಳಸಿ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಡೂರು ತಹಶೀಲ್ದಾರರ ಕಚೇರಿ ಅಥವಾ ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande