ಜಮಖಂಡಿಯಲ್ಲಿ ಎಸ್ಐಆರ್ ಮಾಹಿತಿ ಕೇಂದ್ರಗಳಿಗೆ ಚಾಲನೆ: 10 ಸಹಾಯವಾಣಿಗಳ ಆರಂಭ
ಬಾಗಲಕೋಟೆ, 04 ಜುಲೈ (ಹಿ.ಸ.) ಆ್ಯಂಕರ್ : ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಹತ್ತು ಕಡೆಗಳಲ್ಲಿ ಮತದಾರರ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ತಿಳ
ಮನವಿ


ಬಾಗಲಕೋಟೆ, 04 ಜುಲೈ (ಹಿ.ಸ.)

ಆ್ಯಂಕರ್ : ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಹತ್ತು ಕಡೆಗಳಲ್ಲಿ ಮತದಾರರ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತಂತೆ ಸಾರ್ವಜನಿಕರಲ್ಲಿ ಇರುವ ಗೊಂದಲಗಳನ್ನು ನಿವಾರಿಸುವುದು, ಅರ್ಜಿ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಲು ಮಾರ್ಗದರ್ಶನ ನೀಡುವುದು ಹಾಗೂ ಅಗತ್ಯ ದಾಖಲೆಗಳ ಕುರಿತು ಮಾಹಿತಿ ಒದಗಿಸುವ ಉದ್ದೇಶದಿಂದ ಈ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.

ನಗರದ ಬಸವಭವನ, ಅಬೂಬಬ್ಕರ್ ದರ್ಗಾ, ಪಶು ಆಸ್ಪತ್ರೆ ಆವರಣ, ಅಂಬೇಡ್ಕರ್ ಭವನ, ಶಾಲನ್ ಗೇಟ್ ಪೊಲೀಸ್ ಚೌಕಿ ಸಮೀಪ, ರುದ್ರಸ್ವಾಮಿ ಪೇಟೆ, ಗ್ರಾಮ ಚಾವಡಿ, ಗಾಣದೇವಿ ಗುಡಿ, ಚೌಡಯ್ಯ ನಗರ ಹಾಗೂ ಕಾಡದಿದ್ದೇಶ್ವರ ಕಾಲನಿಯ ಗಣಪತಿ ದೇವಸ್ಥಾನ ಸೇರಿದಂತೆ ಒಟ್ಟು ಹತ್ತು ಸ್ಥಳಗಳಲ್ಲಿ ಸಹಾಯವಾಣಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.

ಈ ಸಹಾಯವಾಣಿ ಕೇಂದ್ರಗಳು ಜುಲೈ 6ರಿಂದ ಕಾರ್ಯಾರಂಭಗೊಳ್ಳಲಿದ್ದು, ಮತದಾರರು ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ, ದಾಖಲೆಗಳ ಪರಿಶೀಲನೆ ಸೇರಿದಂತೆ ಎಸ್ಐಆರ್ ಗೆ ಸಂಬಂಧಿಸಿದ ಯಾವುದೇ ಮಾಹಿತಿಗಾಗಿ ಈ ಕೇಂದ್ರಗಳಲ್ಲಿರುವ ಅಧಿಕಾರಿಗಳ ನೆರವನ್ನು ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

ಮತದಾರರು ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ, ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಮತದಾರರ ಮಾಹಿತಿಯನ್ನು ಸರಿಪಡಿಸಿಕೊಳ್ಳುವಂತೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮನವಿ ಮಾಡಿದ್ದಾರೆ.

ಮತದಾರರ ಅನುಕೂಲಕ್ಕಾಗಿ ನಗರದ ವಿವಿಧ ಭಾಗಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯುತ್ತಿರುವುದು ಎಸ್ಐಆರ್ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಧಿಕಾರಿಗಳು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande