ಕೊಪ್ಪಳ - ಕೃಷಿ ಕ್ಷೇತ್ರದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ, 04 ಜುಲೈ (ಹಿ.ಸ.) ಆ್ಯಂಕರ್: ಅಲುಮಿನಿ ಅಸೋಷಿಯೇಶನ್-ಕೃಷಿ ವಿಶ್ವ ವಿದ್ಯಾಲಯ, ಹೆಬ್ಬಾಳ, ಬೆಂಗಳೂರು ರವರಿಂದ ಕೃಷಿ ಕ್ಷೇತ್ರದಲ್ಲಿ ಘೋಷಣೆಯಾಗಿರುವ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿನ ವಿವಿಧ ಪ್ರಶಸ್ತಿಗಳಿಗೆ ಅರ್ಹ ಅಭ್ಯರ್ಥಿಗಳು ಜುಲೈ 31ರ ಒಳಗಾಗಿ
ಕೊಪ್ಪಳ - ಕೃಷಿ ಕ್ಷೇತ್ರದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ


ಕೊಪ್ಪಳ, 04 ಜುಲೈ (ಹಿ.ಸ.)

ಆ್ಯಂಕರ್: ಅಲುಮಿನಿ ಅಸೋಷಿಯೇಶನ್-ಕೃಷಿ ವಿಶ್ವ ವಿದ್ಯಾಲಯ, ಹೆಬ್ಬಾಳ, ಬೆಂಗಳೂರು ರವರಿಂದ ಕೃಷಿ ಕ್ಷೇತ್ರದಲ್ಲಿ ಘೋಷಣೆಯಾಗಿರುವ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಕ್ಷೇತ್ರದಲ್ಲಿನ ವಿವಿಧ ಪ್ರಶಸ್ತಿಗಳಿಗೆ ಅರ್ಹ ಅಭ್ಯರ್ಥಿಗಳು ಜುಲೈ 31ರ ಒಳಗಾಗಿ

ಕಾರ್ಯದರ್ಶಿ ಹಳೆಯ ವಿದ್ಯಾರ್ಥಿಗಳ ಸಂಘ, ಯುಎಎಸ್ ಕನ್ವೆನ್ಷನ್ ಸೆಂಟರ್ ಹೆಬ್ಬಾಳ, ಬೆಂಗಳೂರು-560024’’ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು. ಈ ಪ್ರಸಸ್ತಿಗಳಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈತ ಹಾಗೂ ರೈತ ಮಹಿಳೆಯರು ಅರ್ಜಿಗಳನ್ನು ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದಾಗಿದೆ ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರಾದ ಜಿ.ಡಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande