
ನವದೆಹಲಿ, 04 ಜುಲೈ (ಹಿ.ಸ.):
ಆ್ಯಂಕರ್:
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ಎರಡು ದಿನಗಳ ಉತ್ತರ ಪ್ರದೇಶ ಪ್ರವಾಸ ಶನಿವಾರ ಆರಂಭವಾಗಿದ್ದು, ಅವರು ಲಖನೌ ತಲುಪಿದ್ದಾರೆ.
ಲಖನೌನ ಕೃಷ್ಣಾನಗರ ಮೋಡ್‌ನಿಂದ ಉತ್ತರ ಪ್ರದೇಶ ಬಿಜೆಪಿ ರಾಜ್ಯ ಕಚೇರಿವರೆಗೆ ಅವರ ನೇತೃತ್ವದಲ್ಲಿ ಭವ್ಯ ರೋಡ್‌ಶೋ ಆಯೋಜಿಸಲಾಗಿದೆ. ಈ ವೇಳೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿ ಸ್ವಾಗತ ಕೋರಲಿದ್ದಾರೆ.
ಪ್ರವಾಸದ ಮೊದಲ ದಿನ ನಿತಿನ್ ನವೀನ್ ಅವರು ಇತ್ತೀಚೆಗೆ ರಚನೆಯಾದ ಉತ್ತರ ಪ್ರದೇಶ ಬಿಜೆಪಿ ನೂತನ ರಾಜ್ಯ ತಂಡದ ಸದಸ್ಯರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಬಳಿಕ ಯೋಗಿ ಆದಿತ್ಯನಾಥ, ಉಪಮುಖ್ಯಮಂತ್ರಿಗಳು, ಬಿಜೆಪಿ ಸಂಸದರು ಹಾಗೂ ಶಾಸಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ಮುಂಬರುವ ರಾಜಕೀಯ ಕಾರ್ಯತಂತ್ರ, ಸಂಘಟನೆ ಬಲವರ್ಧನೆ ಹಾಗೂ ಚುನಾವಣಾ ಸಿದ್ಧತೆ ಕುರಿತು ಚರ್ಚಿಸಲಿದ್ದಾರೆ.
ಇದರ ಜೊತೆಗೆ ರಾಜ್ಯ ಕೋರ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಸಂಘಟನಾ ಚಟುವಟಿಕೆಗಳ ಪರಿಶೀಲನೆ ನಡೆಸಲಿದ್ದಾರೆ. ಪ್ರವಾಸದ ಅವಧಿಯಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖ ಗಣ್ಯರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುವ ಕಾರ್ಯಕ್ರಮವೂ ನಿಗದಿಯಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.