ಬಾಗಲಕೋಟೆಯಲ್ಲಿ ಅನಧಿಕೃತ ಕಟ್ಟಡಗಳಿಗೆ ಕಡಿವಾಣ
ತೆರಿಗೆ ಬಾಕಿದಾರರ ವಿರುದ್ಧ ಕ್ರಮ – ರಾಜಕೀಯ ಬೆಂಬಲಿತ ಹೋಟೆಲ್ಗಳ ವಿಚಾರಕ್ಕೆ ವಿಶೇಷ ಸಭೆ: ನಗರಸಭೆ ಆಯುಕ್ತ
ಹೋಟೆಲ್


ಬಾಗಲಕೋಟೆ, 04 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ನಗರದಲ್ಲಿ ಹೆಚ್ಚುತ್ತಿರುವ ಅನಧಿಕೃತ ಕಟ್ಟಡಗಳು, ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕಟ್ಟಡ ಮಾಲೀಕರು ಹಾಗೂ ರಾಜಕೀಯ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಹೋಟೆಲ್ಗಳ ವಿರುದ್ಧ ನಗರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ನಗರಸಭೆ ಆಯುಕ್ತ ವಾಸಣ್ಣ

ಆರ್ ತಿಳಿಸಿದ್ದಾರೆ.

ನಗರದಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಲಾದ ಕಟ್ಟಡಗಳು ಹಾಗೂ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಕಟ್ಟಡಗಳ ಬಗ್ಗೆ ನಗರಸಭೆ ಸಮಗ್ರ ಮಾಹಿತಿ ಸಂಗ್ರಹಿಸುತ್ತಿದೆ. ತೆರಿಗೆ ಬಾಕಿದಾರರಿಗೆ ಈಗಾಗಲೇ ನೋಟಿಸ್ಗಳನ್ನು ಜಾರಿಗೊಳಿಸಲಾಗುತ್ತಿದ್ದು, ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸದಿದ್ದರೆ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ನಗರದ ವಿವಿಧ ಭಾಗಗಳಲ್ಲಿ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಕೆಲವು ಹೋಟೆಲ್ಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ ಹೋಟೆಲ್ಗಳಿಗೆ ರಾಜಕೀಯ ಬೆಂಬಲವಿದೆ ಎಂಬ ಆರೋಪಗಳೂ ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲ ಸಂಬಂಧಿತ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ಆಯುಕ್ತರು ತಿಳಿಸಿದರು.

ಸಭೆಯಲ್ಲಿ ನಗರಸಭೆ, ಪಟ್ಟಣ ಯೋಜನೆ, ಆರೋಗ್ಯ, ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದು, ಅನಧಿಕೃತ ಹೋಟೆಲ್ಗಳು ಹಾಗೂ ಕಟ್ಟಡಗಳ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ನಿಯಮ ಉಲ್ಲಂಘಿಸಿರುವವರ ವಿರುದ್ಧ ಯಾವುದೇ ಒತ್ತಡಕ್ಕೂ ಮಣಿಯದೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಹೇಳಿದರು.

ನಗರದ ಸುಸಂಘಟಿತ ಅಭಿವೃದ್ಧಿ, ಸಾರ್ವಜನಿಕ ಸುರಕ್ಷತೆ ಮತ್ತು ತೆರಿಗೆ ಸಂಗ್ರಹಣೆ ಹೆಚ್ಚಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಸಹ ನಗರಸಭೆಯೊಂದಿಗೆ ಸಹಕರಿಸಿ ಅನಧಿಕೃತ ಕಟ್ಟಡಗಳು ಹಾಗೂ ತೆರಿಗೆ ವಂಚನೆ ಕುರಿತು ಮಾಹಿತಿ ನೀಡುವಂತೆ ಅವರು ಮನವಿ ಮಾಡಿದರು.

ನಗರಸಭೆಯ ಈ ಕ್ರಮದಿಂದ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಕಡಿವಾಣ ಬೀಳುವ ನಿರೀಕ್ಷೆ ವ್ಯಕ್ತವಾಗಿದ್ದು, ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿ ಮಾಲೀಕರಲ್ಲೂ ಆತಂಕ ಮೂಡಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande