ಜುಲೈ 06ರಂದು ಡಾ.ಬಾಬು ಜಗಜೀವನ ರಾಮ್ ಪುಣ್ಯತಿಥಿ
ರಾಯಚೂರು, 04 ಜುಲೈ (ಹಿ.ಸ.) ಆ್ಯಂಕರ್: ಸಮಾಜ ಕಲ್ಯಾಣ ಇಲಾಖೆಯಿಂದ ಜುಲೈ 06ರಂದು ಹಸಿರು ಕಾಂತ್ರಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ರವರ ಪುಣ್ಯತಿಥಿ ನಿಮಿತ್ಯ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ
ಜುಲೈ 06ರಂದು ಡಾ.ಬಾಬು ಜಗಜೀವನ ರಾಮ್ ಪುಣ್ಯತಿಥಿ


ರಾಯಚೂರು, 04 ಜುಲೈ (ಹಿ.ಸ.)

ಆ್ಯಂಕರ್: ಸಮಾಜ ಕಲ್ಯಾಣ ಇಲಾಖೆಯಿಂದ ಜುಲೈ 06ರಂದು ಹಸಿರು ಕಾಂತ್ರಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ರವರ ಪುಣ್ಯತಿಥಿ ನಿಮಿತ್ಯ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.

ಅಂದು ಬೆಳಿಗ್ಗೆ 9ಗಂಟೆಗೆ ರಾಯಚೂರು ನಗರದ ಸ್ಟೇಷನ್ ವೃತ್ತದಲ್ಲಿರುವ ಡಾ.ಬಾಬು ಜಗಜೀವನ ರಾಮ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿಗಳು ಮಾಲಾರ್ಪಣೆ ಮಾಡಲಿದ್ದು, ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande