ಕುಷ್ಟಗಿ : ದೇವಾಂಗ ಪ್ರತಿಭಾ ಪುರಸ್ಕಾರ
ಕುಷ್ಟಗಿ, 04 ಜುಲೈ (ಹಿ.ಸ.) ಆ್ಯಂಕರ್ : ಜಿಲ್ಲಾ ದೇವಾಂಗ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ದೇವಾಂಗ ನೌಕರರ ಕ್ಷೇಮಾಭಿವೃದ್ಧಿ ಸಂಘ, ಕುಷ್ಟಗಿ ತಾಲೂಕು ದೇವಾಂಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹನುಮಸಾಗರದ ದೇವಾಂಗ ಸಮಾಜ ಮತ್ತು ಡಾ. ಎಸ್.ಜಿ. ಬಿಜ್ಜಳ ಸ್ಮಾರಕ ಪ್ರತಿಷ್ಟಾನದ ಸಹಯೋಗದಲ್ಲಿ ಜಿಲ್ಲೆಯ ಹನುಮಸ
ಕುಷ್ಟಗಿ  : ದೇವಾಂಗ ಪ್ರತಿಭಾ ಪುರಸ್ಕಾರ


ಕುಷ್ಟಗಿ, 04 ಜುಲೈ (ಹಿ.ಸ.)

ಆ್ಯಂಕರ್ : ಜಿಲ್ಲಾ ದೇವಾಂಗ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ದೇವಾಂಗ ನೌಕರರ ಕ್ಷೇಮಾಭಿವೃದ್ಧಿ ಸಂಘ, ಕುಷ್ಟಗಿ ತಾಲೂಕು ದೇವಾಂಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹನುಮಸಾಗರದ ದೇವಾಂಗ ಸಮಾಜ ಮತ್ತು ಡಾ. ಎಸ್.ಜಿ. ಬಿಜ್ಜಳ ಸ್ಮಾರಕ ಪ್ರತಿಷ್ಟಾನದ ಸಹಯೋಗದಲ್ಲಿ ಜಿಲ್ಲೆಯ ಹನುಮಸಾಗರ ಗ್ರಾಮದ ಬನಶಂಕರಿ ದೇವಸ್ಥಾನದಲ್ಲಿ ಜು. 5ರಂದು ರವಿವಾರ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಈ ಮೂಲಕ ಸಮಾಜದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ನಿವೃತ್ತ ನೌಕರರು ಮತ್ತು ಹೊಸದಾಗಿ ನೌಕರಿಗೆ ಸೇರಿದ ಎಲ್ಲರನ್ನು ಸನ್ಮಾನಿಸಲಾಗುವುದು. ವಿದ್ಯಾನಿಧಿ ಯೋಜನೆ ದತ್ತಿನಿಧಿ ಮೂಲಕ ಪ್ರತಿ ವರ್ಷವೂ ಎಸ್ಎಸ್ಎಲ್ಸಿ ಪಿಯುಸಿ ಹಾಗೂ ಡಿಗ್ರಿಯಲ್ಲಿ ಹೆಚ್ಚು ಅಂಕ ಗಳಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದರು.

ನೇಕಾರಿಕೆ ವೃತ್ತಿ ಮೂಲಕ ಬಡತನದಲ್ಲಿ ಜೀವನ ಸಾಗಿಸುತ್ತಿರುವ ಹಲವಾರು ಬಡ ವಿದ್ಯಾರ್ಥಿಗಳಿಗೆ ನಮ್ಮ ಸಂಘದಿಂದ ಧನಸಹಾಯ ಮಾಡಲಾಗುತ್ತದೆ. ಈ ಮೂಲಕ ಉನ್ನತ ವ್ಯಾಸಂಗ ಪಡೆಯಲು ಅವರಿಗೆ ಸಹಾಯವಾಗಿದ್ದು ಅವರು ಹಣವನ್ನು ಮರಳಿ ಸಂಘಕ್ಕೆ ಹಿಂದಿರುಗಿಸಿ ಮತ್ತೊಂದು ವಿದ್ಯಾರ್ಥಿಗೆ ಅನುಕೂಲವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಈ ವ್ಯವಸ್ಥೆಯಿಂದ ಹೆಚ್ಚು ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡಲು ಅನುಕೂಲವಾಗುತ್ತದೆ. ಅಲ್ಲದೆ ನಮ್ಮ ಸಮುದಾಯದ ಗಣ್ಯರು ಹಾಗೂ ಶ್ರೀಮಂತರು ನೀಡುವ ಸಹಾಯಧನದಿಂದ ಇಂತಹ ಕಾರ್ಯಕ್ರಮಗಳನ್ನು ಮಾಡಲು ಸಾಧ್ಯವಾಗಿದೆ ಎಂದರು.

ರಾಜ್ಯದಲ್ಲಿ ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆ ಇದ್ದು ನೇಕಾರಕ್ಕೆ ವೃತ್ತಿಯೂ ಕೂಡ ಇಂದು ಅವಸಾನದ ಅಂಚಿಗೆ ತಲುಪುತ್ತಿದೆ. ಆದ್ದರಿಂದ ಸರಕಾರ ಕೂಡಲೇ ನೇಕಾರ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಿ ಧನಸಹಾಯ ನೀಡಬೇಕು ಮತ್ತು ನೇಕಾರಿಕೆಗೆ ಉತ್ತೇಜನ ನೀಡುವಲ್ಲಿ ಕ್ರಮ ಕೈಗೊಳ್ಳಬೇಕೆಂದು ಎಂದು ಎಂದು ಜಿಲ್ಲಾ ದೇವಾಂಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಶಂಕರಪ್ಪ ಚನ್ನಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande