ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು
ಮುಂಬಯಿ, 04 ಜುಲೈ (ಹಿ.ಸ.): ಆ್ಯಂಕರ್: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ತಡರಾತ್ರಿ ಠಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಬೆಳಗ್ಗೆಯಿಂದ ತಜ್ಞ ವೈದ್ಯರ ತಂಡ ವಿವಿಧ ವೈದ್ಯಕೀಯ ಪರೀಕ್ಷೆ
ಏಕನಾಥ ಸಿಂಧೆ ಸಂಗ್ರಹ ಚಿತ್ರ


ಮುಂಬಯಿ, 04 ಜುಲೈ (ಹಿ.ಸ.):

ಆ್ಯಂಕರ್:

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ತಡರಾತ್ರಿ ಠಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಬೆಳಗ್ಗೆಯಿಂದ ತಜ್ಞ ವೈದ್ಯರ ತಂಡ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಶಿವಸೇನೆ (ಶಿಂಧೆ ಬಣ) ಮೂಲಗಳ ಪ್ರಕಾರ, ಶುಕ್ರವಾರದಿಂದಲೇ ಶಿಂಧೆ ಅವರಿಗೆ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡಿದ್ದವು. ವಿಧಾನಸಭೆಯ ಅಧಿವೇಶನ ನಡೆಯುತ್ತಿದ್ದ ವೇಳೆ ಅವರಿಗೆ ತೀವ್ರ ನಿಶಕ್ತಿ ಉಂಟಾಗಿತ್ತು. ವೈರಲ್ ಜ್ವರ ಮತ್ತು ದೌರ್ಬಲ್ಯದ ಹಿನ್ನೆಲೆಯಲ್ಲಿ ವೈದ್ಯರು ಔಷಧೋಪಚಾರ ನೀಡಿದ್ದರು. ಆದರೆ ರಾತ್ರಿ ವೇಳೆಗೆ ಆರೋಗ್ಯದಲ್ಲಿ ಸುಧಾರಣೆ ಕಾಣಿಸದ ಕಾರಣ ಹೆಚ್ಚಿನ ಚಿಕಿತ್ಸೆಗೆ ಠಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಯಿತು.

ಪ್ರಸ್ತುತ ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದ್ದು, ಯಾವುದೇ ಆತಂಕದ ಪರಿಸ್ಥಿತಿ ಇಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದ ರಾಜಕೀಯ ಬೆಳವಣಿಗೆಗಳು ಹಾಗೂ ನಿರಂತರ ಸಭೆಗಳು, ಪ್ರವಾಸಗಳು ಮತ್ತು ಅಧಿಕೃತ ಕಾರ್ಯಕ್ರಮಗಳಿಂದ ಅವರಿಗೆ ಸಮರ್ಪಕ ವಿಶ್ರಾಂತಿ ಸಿಗದಿರುವುದು ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಕೆಲವು ರಾಜಕೀಯ ಕಾರ್ಯಕ್ರಮಗಳು ಹಾಗೂ ಪ್ರವಾಸಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande