ಇದ್ದಲಗಿ ಸಂತ್ರಸ್ತರ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಭೇಟಿ; ಬೇಡಿಕೆಗಳ ಈಡೇರಿಕೆಗೆ ಭರವಸೆ
ಬಾಗಲಕೋಟೆ, 04 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಮೂಲಸೌಲಭ್ಯಗಳ ಕಲ್ಪನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂತ್ರಸ್ತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಭೇಟಿ ನೀಡಿ ಪ
ಪ್ರೊಟೆಸ್ಟ್


ಬಾಗಲಕೋಟೆ, 04 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ

ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಮೂಲಸೌಲಭ್ಯಗಳ ಕಲ್ಪನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂತ್ರಸ್ತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.

ಧರಣಿ ನಿರತ ಗ್ರಾಮಸ್ಥರು ಹಾಗೂ ಸಂತ್ರಸ್ತರು ಗ್ರಾಮದಲ್ಲಿ ಕುಡಿಯುವ ನೀರು, ರಸ್ತೆ, ಒಳಚರಂಡಿ, ವಿದ್ಯುತ್, ವಸತಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಶೀಘ್ರವಾಗಿ ಒದಗಿಸಬೇಕು ಎಂದು ಒತ್ತಾಯಿಸಿದರು. ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿರುವುದಾಗಿ ಅವರು ಶಾಸಕರಿಗೆ ವಿವರಿಸಿದರು.

ಪ್ರತಿಭಟನಾಕಾರರ ಅಹವಾಲುಗಳನ್ನು ಆಲಿಸಿದ ಶಾಸಕ ವಿಜಯಾನಂದ ಕಾಶಪ್ಪನವರು, ಜನರ ಸಮಸ್ಯೆಗಳ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಡಳಿತದ ಗಮನ ಸೆಳೆದು ಶೀಘ್ರ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಿ ನ್ಯಾಯಯುತವಾಗಿ ಸ್ಪಂದಿಸುವುದಾಗಿ ಹೇಳಿದರು.

ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲು ಪ್ರಯತ್ನಿಸಲಾಗುವುದು. ಜನರು ಶಾಂತಿಯುತವಾಗಿ ತಮ್ಮ ಹೋರಾಟ ಮುಂದುವರಿಸುವಂತೆ ಮನವಿ ಮಾಡಿದ ಅವರು, ಸರ್ಕಾರದ ಮಟ್ಟದಲ್ಲಿ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾ ಸಮಿತಿಯ ಮುಖಂಡರು, ಗ್ರಾಮಸ್ಥರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande