ರಾಜ್ಯದಲ್ಲಿ ಮುಂಗಾರು ಚುರುಕು
ಬೆಂಗಳೂರು, 04 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದೂ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಹಗುರದಿಂದ ಸಾ
ರಾಜ್ಯದಲ್ಲಿ ಮುಂಗಾರು ಚುರುಕು


ಬೆಂಗಳೂರು, 04 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದೂ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ರಾಜ್ಯದಾದ್ಯಂತ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತ ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮಲೆನಾಡು ಭಾಗದಲ್ಲಿಯೂ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು-ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande