ಬಳ್ಳಾರಿ : ನಾಳೆ ವಿದ್ಯುತ್ ವ್ಯತ್ಯಯ
ಬಳ್ಳಾರಿ, 04 ಜುಲೈ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿ0ದ ವಿದ್ಯುತ್ ಸರಬರಾಜು ಆಗುವ ಫೀಡರ್ ಎಫ್-47 ರ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿ0ದ ಜು.05 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರ
ಬಳ್ಳಾರಿ : ನಾಳೆ ವಿದ್ಯುತ್ ವ್ಯತ್ಯಯ


ಬಳ್ಳಾರಿ, 04 ಜುಲೈ (ಹಿ.ಸ.)

ಆ್ಯಂಕರ್: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿ0ದ ವಿದ್ಯುತ್ ಸರಬರಾಜು ಆಗುವ ಫೀಡರ್ ಎಫ್-47 ರ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿ0ದ ಜು.05 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಗಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಆಂದ್ರಾಳು ರಸ್ತೆ, ಕೊಲ್ಮಿ ಚೌಕ್, ಮಿಲ್ಲರ್ ಪೇಟೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳ ವಿದ್ಯುತ್ ಸಂಪರ್ಕದಲ್ಲಿ ಕಡಿತವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಜೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande