ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ: ಜಿ.ಪಂ ಸಿಇಒ ಈಶ್ವರ ಕುಮಾರ್
ರಾಯಚೂರು, 04 ಜುಲೈ (ಹಿ.ಸ.) ಆ್ಯಂಕರ್: ಕೇಂದ್ರ ಸರ್ಕಾರದ ಪುರಸ್ಕೃತ ಹೊಸ ಯೋಜನೆ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ ಜುಲೈ 01ರಿಂದ ಜಾರಿಗೆ ಬಂದಿದ್ದು, ಜಿಲ್ಲೆಯಲ್ಲಿಯೂ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ
ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ: ಜಿ.ಪಂ ಸಿಇಒ ಈಶ್ವರ ಕುಮಾರ್


ರಾಯಚೂರು, 04 ಜುಲೈ (ಹಿ.ಸ.)

ಆ್ಯಂಕರ್: ಕೇಂದ್ರ ಸರ್ಕಾರದ ಪುರಸ್ಕೃತ ಹೊಸ ಯೋಜನೆ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ ಜುಲೈ 01ರಿಂದ ಜಾರಿಗೆ ಬಂದಿದ್ದು, ಜಿಲ್ಲೆಯಲ್ಲಿಯೂ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ ಗ್ರಾಮೀಣ ಭಾಗದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ತಿಳಿಸಿದ್ದಾರೆ.

ಅರ್ಹ ಗ್ರಾಮೀಣ ಕುಟುಂಬಕ್ಕೆ ಇನ್ನುಂದೆ 100 ದಿನಗಳ ಬದಲಾಗಿ 125 ಮಾನವ ದಿನಗಳ ಕಡ್ಡಾಯ ಉದ್ಯೋಗ ಕಲ್ಪಿಸುವ ಜೊತೆಗೆ ಗ್ರಾಮೀಣ ಪ್ರದೇಶದ ಸಮಗ್ರ ಮತ್ತು ಸ್ಯಾಚುರೇಷನ್ ಆಧಾರಿತ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.

ಯೋಜನೆಯ ಅನುಷ್ಠಾನಕ್ಕೆ ಸಂಬ0ಧಿಸಿದ0ತೆ ಜಿಲ್ಲೆಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾಉ), ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಎಲ್ಲ ಹಂತದ ಅಧಿಕಾರಿ ಸಿಬ್ಬಂದಿಗಳಿಗೆ ಈಗಾಗಲೇ ಮಾಸ್ಟರ್ ಟ್ರೇನರ್ ಗಳಿಂದ ತರಬೇತಿಯನ್ನು ನೀಡಲಾಗಿದೆ.

ಹೊಸ ಯೋಜನೆಯಡಿ ಗ್ಯಾರಂಟಿ ಕಾರ್ಡ್ ನೀಡುವವರಿಗೆ ಮನರೇಗಾ ಯೋಜನೆಯಡಿ ನೀಡಲಾಗಿದ್ದ ಉದ್ಯೋಗ ಚೀಟಿಗಳನ್ನೇ ಮಾನ್ಯ ಮಾಡಿ, ಆಸಕ್ತರಿಗೆ ಕೆಲಸ ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್ 30ರ ವರೆಗೆ ಮನರೇಗಾ ಯೋಜನೆಯಡಿ ಪ್ರಗತಿಯಲ್ಲಿದ್ದ ಕಾಮಗಾರಿಗಳಲ್ಲಿ ವಿಬಿ-ಜಿ ರಾಮ್-ಜಿ ಯೋಜನೆ ನಿಯಮಕ್ಕೆ ಒಳಪಟ್ಟ ಕಾಮಗಾರಿಗಳನ್ನು ತಡೆರಹಿತವಾಗಿ ಮುಂದುವರೆಸಲು ಅವಕಾಶವಿದ್ದು, ಯೋಜನೆ ಬದಲಾಗುತ್ತಿರುವ ಕಾರಣಕ್ಕಾಗಿ ಯಾವೊಬ್ಬ ಕೂಲಿಕಾರರು ಒಂದು ದಿನವೂ ಉದ್ಯೋಗ ಅವಕಾಶದಿಂದ ವಂಚಿತರಾಗುವ ಪ್ರಮೇಯ ಎದುರಾಗುವುದಿಲ್ಲ.

ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಮಾರ್ಗಸೂಚಿಯಂತೆ ನೊಂದಾಯಿತ ಎಲ್ಲ ಕೂಲಿಕಾರರ ಇ-ಕೆವೈಸಿ ಕಡ್ಡಾಯವಾಗಿರುವುದರಿಂದ ಬಾಕಿ ಉಳಿದಿರುವ ಕೂಲಿಕಾರರ ಇ-ಕೆವೈಸಿ ಪ್ರಕ್ರಿಯೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.

ಹೊಸ ಕಾಯಿದೆಯಡಿ ನಿಯಮಾನುಸಾರ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಯೋಜನೆ ಜಾರಿಗೆ ತರಲು ಸೂಚನೆ ನೀಡಲಾಗಿದ್ದು, ಗ್ರಾಮೀಣ ಭಾಗದ ಎಲ್ಲ ಕೂಲಿಕಾರರು ಕೆಲಸ ಅರಸಿ ದೂರದ ಪಟ್ಟಣಗಳಿಗೆ ವಲಸೆ ಹೋಗದೆ ಸ್ವಂತ ಊರಿನಲ್ಲಿಯೇ ಹೊಸ ಯೋಜನೆಯಡಿ ಕೂಲಿ ಕೆಲಸ ಮತ್ತು ಜೀವನೋಪಾಯ ಸೌಲಭ್ಯ ಪಡೆದುಕೊಳ್ಳಬೇಕು. ಆ ಮೂಲಕ ಸರ್ಕಾರದಿಂದ ಜಾರಿಗೆ ತರಲಾದ ಜನಪರ ಯೋಜನೆಯ ಶತ ಪ್ರತಿಶತ ಸದುಪಯೋಗವನ್ನು ಸಾರ್ವಜನಿಕರು ಪಡೆಯಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನಗೂಲಿ 370 ರೂ. ನಿಂದ 382ಕ್ಕೆ ಏರಿಕೆ ವಿಬಿ-ಜಿ ರಾಮ್-ಜಿ ಯೋಜನೆಯಡಿ ದಿನಗೂಲಿಯನ್ನು 370 ರೂ. ನಿಂದ 382 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೂಲಿ ಮುಂದುವರೆಯಲಿದೆ. ಕೂಲಿ ಹಣವನ್ನು ಗರಿಷ್ಠ 15 ದಿನಗಳ ಒಳಗಾಗಿ ಕೂಲಿಕಾರರ ಬ್ಯಾಂಕ್ ಖಾತೆಗಳಿಗೆ ಕಡ್ಡಾಯವಾಗಿ ಜಮೆ ಮಾಡಬೇಕು. ವಿಳಂಬವಾದರೆ ದಂಡದ ರೂಪದಲ್ಲಿ ಪರಿಹಾರ ನೀಡಬೇಕಾಗುತ್ತದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande