ಸಿಂದಗಿಯಲ್ಲಿ ಎಸ್ಐಆರ್ ತರಬೇತಿ ಶಿಬಿರ: ಸಕ್ರಿಯ ಭಾಗವಹಿಸುವಂತೆ ಕರೆ
ವಿಜಯಪುರ, 04 ಜುಲೈ (ಹಿ.ಸ.) ಆ್ಯಂಕರ್ : ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಸಂಘಟನಾ ಕಾರ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಸಿಂದಗಿ ಹಾಗೂ ಆಲಮೇಲ ತಾಲೂಕಿನ ಬಿಎಲ್ಎ ಮತ್ತು ಬಿಎಲ್ಎ–2 ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗಾಗಿ ವಿಶೇಷ ಎ
ಮತದಾರ ಪಟ್ಟಿ


ವಿಜಯಪುರ, 04 ಜುಲೈ (ಹಿ.ಸ.)

ಆ್ಯಂಕರ್ : ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಸಂಘಟನಾ ಕಾರ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಸಿಂದಗಿ ಹಾಗೂ ಆಲಮೇಲ ತಾಲೂಕಿನ ಬಿಎಲ್ಎ ಮತ್ತು ಬಿಎಲ್ಎ–2 ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗಾಗಿ ವಿಶೇಷ ಎಸ್ಐಆರ್ ತರಬೇತಿ ಶಿಬಿರವನ್ನು ನಾಳೆ ಸಿಂದಗಿಯ ವಿನಾಯಕ ಚಿತ್ರಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ಅಶೋಕ್ ಮನಗೂಳಿ ತಿಳಿಸಿದ್ದಾರೆ.

ಈ ತರಬೇತಿ ಶಿಬಿರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತದಾರರ ನೋಂದಣಿ, ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ, ಹೆಸರು ಕೈಬಿಡುವಿಕೆ ಸೇರಿದಂತೆ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುತ್ತದೆ. ಅಲ್ಲದೆ, ಬೂತ್ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಬಿಎಲ್ಎ ಹಾಗೂ ಬಿಎಲ್ಎ–2ಗಳ ಜವಾಬ್ದಾರಿಗಳು, ಸಂಘಟನಾ ಕಾರ್ಯವೈಖರಿ ಹಾಗೂ ಕ್ಷೇತ್ರಮಟ್ಟದಲ್ಲಿ ಪರಿಣಾಮಕಾರಿ ಸಮನ್ವಯ ಸಾಧಿಸುವ ಕುರಿತು ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ.

ಶಿಬಿರದಲ್ಲಿ ಭಾಗವಹಿಸುವ ಮೂಲಕ ಕಾರ್ಯಕರ್ತರು ಚುನಾವಣಾ ಸಂಬಂಧಿತ ನಿಯಮಗಳು, ಕಾರ್ಯವಿಧಾನಗಳು ಹಾಗೂ ಇತ್ತೀಚಿನ ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟ ಅರಿವು ಪಡೆದು ತಮ್ಮ ಜವಾಬ್ದಾರಿಗಳನ್ನು ಇನ್ನಷ್ಟು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ.

ಸಿಂದಗಿ ಮತ್ತು ಆಲಮೇಲ ತಾಲೂಕಿನ ಎಲ್ಲಾ ನಿಯೋಜಿತ ಬಿಎಲ್ಎ, ಬಿಎಲ್ಎ–2 ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಗೈರುಹಾಜರಾಗದೆ ಈ ಮಹತ್ವದ ತರಬೇತಿ ಶಿಬಿರದಲ್ಲಿ ಕಡ್ಡಾಯವಾಗಿ ಭಾಗವಹಿಸಿ, ತರಬೇತಿಯ ಸಂಪೂರ್ಣ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟನೆಯ ಮುಖಂಡರು ಮನವಿ ಮಾಡಿದ್ದಾರೆ.

ಈ ಶಿಬಿರವು ಮುಂಬರುವ ಚುನಾವಣಾ ಸಿದ್ಧತೆ, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಸಂಘಟನಾ ಬಲವರ್ಧನೆಗೆ ಸಹಕಾರಿಯಾಗಲಿದ್ದು, ಕ್ಷೇತ್ರದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮತ್ತು ಕಾರ್ಯಕ್ಷಮತೆಯನ್ನು ಮೂಡಿಸುವ ನಿರೀಕ್ಷೆ ವ್ಯಕ್ತವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande