ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: ವಕ್ಫ್ ಸಂಸ್ಥೆಗಳಲ್ಲಿ ಜಾಗೃತಿ
ಬಳ್ಳಾರಿ, 04 ಜುಲೈ (ಹಿ.ಸ.) ಆ್ಯಂಕರ್: ಭಾರತ ಚುನಾವಣಾ ಆಯೋಗವು ಕರ್ನಾಟಕ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ 2026 ರ ಕುರಿತು ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಸಮಗ್ರ ಜಾಗೃತಿ ಮೂಡಿಸುವಂತೆ ಜಿಲ್ಲಾ ವಕ್ಫ್ ಅಧಿಕಾರಿಗಳು ತ
ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: ವಕ್ಫ್ ಸಂಸ್ಥೆಗಳಲ್ಲಿ ಜಾಗೃತಿ


ಬಳ್ಳಾರಿ, 04 ಜುಲೈ (ಹಿ.ಸ.)

ಆ್ಯಂಕರ್: ಭಾರತ ಚುನಾವಣಾ ಆಯೋಗವು ಕರ್ನಾಟಕ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ 2026 ರ ಕುರಿತು ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಸಮಗ್ರ ಜಾಗೃತಿ ಮೂಡಿಸುವಂತೆ ಜಿಲ್ಲಾ ವಕ್ಫ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯಾದ್ಯಂತ ಮತದಾರರ ನೋಂದಣಿ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಇದರ ಭಾಗವಾಗಿ ಪ್ರಾರಂಭಿಸಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ ಅತ್ಯಂತ ನಿರ್ಣಾಯಕ ಪ್ರಕ್ರಿಯೆಯಾಗಿದೆ.

ಈ ಅಭಿಯಾನವು ಹೊಸ ಅರ್ಹ ಮತದಾರರನ್ನು ನೋಂದಾಯಿಸುವ, ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸುವ ಮತ್ತು ಕುಟುಂಬದ ಸದಸ್ಯರ ಹೆಸರುಗಳನ್ನು ಒಟ್ಟಿಗೆ ಜೋಡಿಸುವ ಮೂಲಕ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ನವೀಕರಿಸುವ ಉದ್ದೇಶ ಹೊಂದಿದೆ. ಅರ್ಹವಿರುವ ಯಾವುದೇ ಒಬ್ಬ ನಾಗರಿಕನೂ ಸಹ ರಾಜ್ಯದ ನವೀಕರಿಸಿದ ಚುನಾವಣಾ ಪಟ್ಟಿಯಿಂದ ವಂಚಿತರಾಗಬಾರದು ಎನ್ನುವುದು ಇದರ ಮುಖ್ಯ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

*ವಕ್ಫ್ ಸಂಸ್ಥೆಗಳಿಗೆ ನೀಡಿರುವ ಸೂಚನೆಗಳು:*

*ಶುಕ್ರವಾರದ ಖುತ್ಬಾದಲ್ಲಿ ಜಾಗೃತಿ:* ಜಿಲ್ಲೆಯಾದ್ಯಂತದ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು, ಪೇಶ್ ಇಮಾಮ್ಗಳು ಹಾಗೂ ಉಲೇಮಾಗಳು ಪವಿತ್ರ ಜುಮ್ಮಾ ಪ್ರಾರ್ಥನೆಯ ಸಮಯದ ಖುತ್ಬಾದಲ್ಲಿ ಎಸ್.ಐ.ಆರ್-2026 ಪ್ರಕ್ರಿಯೆಯ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ವಿವರಿಸಬೇಕು.

*ಮಾಹಿತಿ ಪ್ರದರ್ಶನ:* ಪ್ರತಿಯೊಂದು ವಕ್ಫ್ ಸಂಸ್ಥೆಯು ತನ್ನ ವ್ಯಾಪ್ತಿಯಲ್ಲಿ ಎಸ್.ಐ.ಆರ್ 2026 ರ ಕಾಲಮಿತಿ ಮತ್ತು ಬಿ.ಎಲ್.ಓ ಗಳ ಪ್ರದೇಶವಾರು ಸಂಪರ್ಕ ಸಂಖ್ಯೆಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು.

*ಸಹಾಯ ಕೇಂದ್ರಗಳ ಸ್ಥಾಪನೆ:* ಸಾರ್ವಜನಿಕರಿಗೆ ಮತದಾರರ ಪಟ್ಟಿಯ ಪರಿಶೀಲನೆ ಹಾಗೂ ನೋಂದಣಿಗೆ ನೆರವಾಗಲು ಆಯಾ ಪ್ರದೇಶದ ಮಸೀದಿಗಳಲ್ಲಿ ತಾತ್ಕಾಲಿಕ ಸಹಾಯ ಕೇಂದ್ರಗಳನ್ನು ಸ್ಥಾಪಿಸಬೇಕು.

ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗಳು ಜಾರಿಗೊಳಿಸಿರುವ ಅಧಿಕೃತ ಕಾಲಮಿತಿಯ ಬಗ್ಗೆ ಸಾರ್ವಜನಿಕರಿಗೆ ಸಂಪೂರ್ಣವಾಗಿ ಮಾಹಿತಿ ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು ಹಾಗೂ ಮುತವಲ್ಲಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande