ಚಡಚಣ ತಾಲೂಕು ಪಂಚಾಯತ್ ಆಡಳಿತಾಧಿಕಾರಿಯ ಎಚ್ಚರಿಕೆ: ಸರ್ಕಾರಿ ಆಸ್ತಿ ಹಾಗೂ ಗಿಡಗಳನ್ನು ಹಾಳು ಮಾಡಿದರೆ ಕಠಿಣ ಕ್ರಮ
ವಿಜಯಪುರ, 04 ಜುಲೈ (ಹಿ.ಸ.) ಆ್ಯಂಕರ್ : ಚಡಚಣ ಪಟ್ಟಣಕ್ಕೆ ತಾಲೂಕು ಪಂಚಾಯತ್ನ ನೂತನ ಆಡಳಿತಾಧಿಕಾರಿ ಆರ್ ಬಿರಾದಾರ ಅಧಿಕಾರ ಸ್ವೀಕರಿಸಿದ ಬಳಿಕ ಆಡಳಿತ ವ್ಯವಸ್ಥೆಯಲ್ಲಿ ಶಿಸ್ತು ಮತ್ತು ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಸಾ
ಗಿಡ


ವಿಜಯಪುರ, 04 ಜುಲೈ (ಹಿ.ಸ.)

ಆ್ಯಂಕರ್ : ಚಡಚಣ ಪಟ್ಟಣಕ್ಕೆ ತಾಲೂಕು ಪಂಚಾಯತ್ನ ನೂತನ ಆಡಳಿತಾಧಿಕಾರಿ ಆರ್ ಬಿರಾದಾರ ಅಧಿಕಾರ ಸ್ವೀಕರಿಸಿದ ಬಳಿಕ ಆಡಳಿತ ವ್ಯವಸ್ಥೆಯಲ್ಲಿ ಶಿಸ್ತು ಮತ್ತು ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಸಾರ್ವಜನಿಕ ಆಸ್ತಿ, ಪರಿಸರ ಹಾಗೂ ಅಭಿವೃದ್ಧಿ ಕಾಮಗಾರಿಗಳ ರಕ್ಷಣೆಗೆ ಎಲ್ಲರೂ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಪಟ್ಟಣದ ವಿವಿಧ ಪ್ರದೇಶಗಳ ಪರಿಶೀಲನೆ ನಡೆಸಿದ ಆಡಳಿತಾಧಿಕಾರಿಯವರು, ಸರ್ಕಾರದ ವತಿಯಿಂದ ನೆಡಲಾಗಿರುವ ಗಿಡಗಳನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವುದು, ಸಾರ್ವಜನಿಕ ಆಸ್ತಿಗೆ ಹಾನಿ ಉಂಟುಮಾಡುವುದು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಪಡಿಸುವವರ ವಿರುದ್ಧ ಯಾವುದೇ ರೀತಿಯ ಸಹಾನುಭೂತಿ ತೋರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಾರ್ವಜನಿಕ ಆಸ್ತಿ ಎಲ್ಲರ ಆಸ್ತಿ. ಗಿಡಗಳನ್ನು ಬೆಳೆಸುವುದು ಪರಿಸರ ಸಂರಕ್ಷಣೆಯ ಜವಾಬ್ದಾರಿ. ಅವುಗಳನ್ನು ಹಾಳು ಮಾಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು, ಎಂದು ಅವರು ಹೇಳಿದರು.

ಪಟ್ಟಣವನ್ನು ಸ್ವಚ್ಛ, ಹಸಿರು ಹಾಗೂ ಅಭಿವೃದ್ಧಿಯತ್ತ ಕೊಂಡೊಯ್ಯಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ನಾಗರಿಕರು ಯಾವುದೇ ಅಕ್ರಮ ಚಟುವಟಿಕೆ ಅಥವಾ ಸಾರ್ವಜನಿಕ ಆಸ್ತಿಗೆ ಹಾನಿಯಾಗುತ್ತಿರುವುದು ಕಂಡುಬಂದರೆ ತಕ್ಷಣ ತಾಲೂಕು ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದರು.

ಆಡಳಿತಾಧಿಕಾರಿಯವರ ಈ ಕಟ್ಟುನಿಟ್ಟಿನ ಸೂಚನೆಯಿಂದ ಸರ್ಕಾರಿ ಆಸ್ತಿ ರಕ್ಷಣೆ, ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರಲ್ಲಿ ಜವಾಬ್ದಾರಿಯ ಮನೋಭಾವ ಮೂಡಿಸುವ ಪ್ರಯತ್ನಕ್ಕೆ ಮತ್ತಷ್ಟು ಬಲ ಸಿಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande