ತುಂಗಭದ್ರಾ : ಬಲದಂಡೆ ಮತ್ತು ಎಡದಂಡೆ ನೀರು ಹರಿಸಲು ಸಾಧ್ಯವಿಲ್ಲ
ರಾಯಚೂರು, 04 ಜುಲೈ (ಹಿ.ಸ.) ಆ್ಯಂಕರ್: ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ತುಂಗಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ. ಆದಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್
ತುಂಗಭದ್ರಾ : ಬಲದಂಡೆ ಮತ್ತು ಎಡದಂಡೆ ನೀರು ಹರಿಸಲು ಸಾಧ್ಯವಿಲ್ಲ


ರಾಯಚೂರು, 04 ಜುಲೈ (ಹಿ.ಸ.)

ಆ್ಯಂಕರ್: ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ತುಂಗಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ. ಆದಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿರುವ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.

ಮುಂಬರುವ ದಿನಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಜಲಾಶಯ ಭರ್ತಿಯಾದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಆಯೋಜಿಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ತುಂಗಭದ್ರಾ ಯೋಜನಾ ವೃತ್ತ ಕಾರ್ಯದರ್ಶಿಗಳು ಹಾಗೂ ಮುನಿರಾಬಾದ್ ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande