ಬೆ. ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಡಾ. ಅಂಬೇಡ್ಕರ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಬೆಂಗಳೂರು, 05 ಜುಲೈ (ಹಿ.ಸ.): ಆ್ಯಂಕರ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 14 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ಪ್ರತಿಪಕ್ಷದ ನಾಯಕ
Ambedkar bronze statue unveiled


ಬೆಂಗಳೂರು, 05 ಜುಲೈ (ಹಿ.ಸ.):

ಆ್ಯಂಕರ್:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 14 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಭಾನುವಾರ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಾಬಾಸಾಹೇಬರು ಕನಸು ಕಂಡಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ದೊರೆಯಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ಹೇಳಿದರು.

ಈ ಪ್ರತಿಮೆಯು ಸಂವಿಧಾನದ ಮೂಲ ಆಶಯಗಳು, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸದಾ ನೆನಪಿಸುವುದರ ಜೊತೆಗೆ, ಆ ಆದರ್ಶಗಳ ಸಾಕಾರಕ್ಕಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ಪ್ರೇರಣೆ ನೀಡುವ ಸಾಂಕೇತಿಕ ದಿಕ್ಸೂಚಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಶಾಸಕರಾದ ಶರತ್ ಬಚ್ಚೇಗೌಡ, ಆನೇಕಲ್ ಶಿವಣ್ಣ, ಎನ್. ಶ್ರೀನಿವಾಸ್, ಧೀರಜ್ ಮುನಿರಾಜು, ಶ್ರೀನಿವಾಸ್, ಸಂಸದ ಡಾ. ಕೆ. ಸುಧಾಕರ್, ವಿಧಾನ ಪರಿಷತ್ ಸದಸ್ಯ ರವಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande