ಮೊರೆರಾ ಬೆಟ್ಟದ ಸಮಾಧಿಗಳ ಸಂರಕ್ಷಣೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ
ಕೊಪ್ಪಳ, 05 ಜುಲೈ (ಹಿ.ಸ.) ಆ್ಯಂಕರ್ :ಬೃಹತ್ ಶಿಲಾಯುಗದ ನೆಲೆ ಎಂದೇ ಪ್ರಸಿದ್ಧಿ ಪಡೆದ ಹಾಗೂ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಯಲ್ಲಿ ತಾತ್ಕಾಲಿಕ ಸ್ಥಾನ ಪಡೆದಿರುವ ಹಿರೇಬೆನಕಲ್ ಮೊರೆರಾ ಬೆಟ್ಟದಲ್ಲಿನ ಸಮಾಧಿ ಸ್ಥಳಗಳ ಸಂರಕ್ಷಣೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವ
ಮೊರೆರಾ ಬೆಟ್ಟದ ಸಮಾಧಿಗಳ ಸಂರಕ್ಷಣೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ


ಕೊಪ್ಪಳ : ಪ್ರಕೃತಿ ವಿಕೋಪ ವರದಿ ಪಡೆದ ಜಿಲ್ಲಾ ಕಾರ್ಯದರ್ಶಿ


ಕೊಪ್ಪಳ, 05 ಜುಲೈ (ಹಿ.ಸ.)

ಆ್ಯಂಕರ್ :ಬೃಹತ್ ಶಿಲಾಯುಗದ ನೆಲೆ ಎಂದೇ ಪ್ರಸಿದ್ಧಿ ಪಡೆದ ಹಾಗೂ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಯಲ್ಲಿ ತಾತ್ಕಾಲಿಕ ಸ್ಥಾನ ಪಡೆದಿರುವ ಹಿರೇಬೆನಕಲ್ ಮೊರೆರಾ ಬೆಟ್ಟದಲ್ಲಿನ ಸಮಾಧಿ ಸ್ಥಳಗಳ ಸಂರಕ್ಷಣೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ವಸತಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ. ಮೋಹನ್ ರಾಜ್ ಅವರು ಹೇಳಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆನಕಲ್ ಮೊರೆರಾ ಬೆಟ್ಟದಲ್ಲಿರುವ ಬೃಹತ್ ಶಿಲಾಯುಗದ ಸಮಾಧಿ ಸ್ಥಳಗಳ ಸಂರಕ್ಷಣೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿರೇಬೆನಕಲ್ ಮೊರೆರಾ ಬೆಟ್ಟಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು. ಅರಣ್ಯ ಸಂರಕ್ಷಣೆಯ ಜೊತೆಗೆ ಬೆಟ್ಟದ ಅಭಿವೃದ್ಧಿಗೂ ಕ್ರಮ ಕೈಗೊಳ್ಳಬೇಕಿದ್ದು, ಈ ಹಿನ್ನೆಲೆಯಲ್ಲಿ ಮೋರೆರ್ ಬೆಟ್ಟದ ಪ್ರದೇಶದಲ್ಲಿ ಅರಣ್ಯ ಇಲಾಖೆಯಿಂದ ಸಿಸಿಟಿವಿ ಅಳವಡಿಕೆ ಎಪಿಸಿ ಕ್ಯಾಂಪ್, ಸೋಲಾರ್ ಲೈಟ್ ಅಳವಡಿ, ವಾಚ್ ಟವರ್, ಬೋರ್ವೆಲ್ & ಪಂಪ್, ಬೋರ್ವೆಲ್ಗೆ ವಿದ್ಯುತ್ ಸಂಪರ್ಕ, ಶೌಚಾಲಯಗಳು, ಪ್ರವೇಶ ಕಮಾನು, ಗೇಟ್, ಆಸನ ವ್ಯವಸ್ಥೆ ಹೀಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಕಾಮಗಾರಿಗಳ ಟೆಂಡರ್ ಪ್ರಕ್ರೀಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಈ ಎಲ್ಲಾ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿರೇಬೆನಕಲ್ ಮೊರೆರಾ ಬೆಟ್ಟದಲ್ಲಿ ಪ್ರತಿನಿತ್ಯ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಮಧ್ಯಹ್ನ 2 ರಿಂದ ಸಂಜೆ 6 ಗಂಟೆಯವರಿಗೆ ಪುರಾತತ್ವ ಇಲಾಖೆ (ಎ.ಎಸ್.ಐ) ವತಿಯಿಂದ ಮೂರು ಜನರು ರಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಬೆಟ್ಟದಲ್ಲಿ ರಾತ್ರಿ ವೇಳೆಯಲ್ಲಿಯೂ ರಕ್ಷಕರನ್ನು ನಿಯೋಜಿಸುವುದು ಅತ್ಯವಶ್ಯಕವಾಗಿದ್ದು, ಮತ್ತಿಬ್ಬರು ಸ್ಮಾರಕ ಮಿತ್ರರನ್ನು ನೇಮಿಸಿಕೊಳ್ಳುವ ವ್ಯವಸ್ಥೆಯಾಗಬೇಕು. ಈ ಬಗ್ಗೆ ಅರಣ್ಯ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಜೊತೆಗೆ ಅರಣ್ಯ ಇಲಾಖೆಯ ರಕ್ಷಕರು ರಾತ್ರಿ ವೇಳೆ ಈ ಪ್ರದೇಶಲ್ಲಿ ಗಸ್ತು ಹಾಕಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಿರೇಬೆಣಕಲ್ ಗ್ರಾಮದ ಮೊರೆರ್ ಬೆಟ್ಟದ ಪ್ರದೇಶದಲ್ಲಿ ಅರಣ್ಯ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿ ರೂ. 80 ಲಕ್ಷಗಳ ಅನುದಾನ ನೀಡಲಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿರುತ್ತದೆ. ಮೊರೆರ ಬೆಟ್ಟದ ಸ್ಮಾರಗಳ ರಕ್ಷಣೆಗೆ ಸರ್ವ ರೀತಿಯಲ್ಲಿಯೂ ಪ್ರಯತ್ನಿಸಲಾಗುವುದು ಎಂದರು.

ಹಿರೆಬೆಣಕಲ್ ಮೊರೆರ ಬೆಟ್ಟದ ಇತಿಹಾಸದ ಕುರಿತು ಕೊಪ್ಪಳ ಪ್ರವಾಸೋದ್ಯಮ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ್ ಅವರು ತಿಳಿಸಿದರು.

ಸಭೆಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಕೊಪ್ಪಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ನಿರ್ಮಲ, ಗಂಗಾವತಿ ವಲಯ ಅರಣ್ಯಾಧಿಕಾರಿ ಬಸವರಾಜ ಪೂಜಾರ ಸೇರಿದಂತೆ ಪುರಾತತ್ವ ಇಲಾಖೆ, ಗಂಗಾವತಿಯ ಕಂದಾಯ ಮತ್ತು ತಾ.ಪಂ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande