ವಿಕಸಿತ ಭಾರತದ ನಿರ್ಮಾಣಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ:ಸಂಜಯ ಪಾಟೀಲ
ವಿಜಯಪುರ, 05 ಜುಲೈ (ಹಿ.ಸ.) ಆ್ಯಂಕರ್ : ದೇಶದ ಆರ್ಥಿಕ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವಲ್ಲಿ ಹಾಗೂ ವಿಕಸಿತ ಭಾರತ ನಿರ್ಮಾಣದ ಕನಸನ್ನು ಸಾಕಾರಗೊಳಿಸುವಲ್ಲಿ ಸಹಕಾರ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರಿನ ನಿರ್ದೇಶಕರ
ಸಭೆ


ವಿಜಯಪುರ, 05 ಜುಲೈ (ಹಿ.ಸ.)

ಆ್ಯಂಕರ್ : ದೇಶದ ಆರ್ಥಿಕ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವಲ್ಲಿ ಹಾಗೂ ವಿಕಸಿತ ಭಾರತ ನಿರ್ಮಾಣದ ಕನಸನ್ನು ಸಾಕಾರಗೊಳಿಸುವಲ್ಲಿ ಸಹಕಾರ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರಿನ ನಿರ್ದೇಶಕರಾದ ಸಂಜಯ ಪಾಟೀಲ (ಕನಮಡಿ) ಹೇಳಿದರು.

ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯವಾಕ್ಯದಡಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು, ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟ ನಿ., ವಿಜಯಪುರ ಹಾಗೂ ತಾಳಿಕೋಟಿ ತಾಲ್ಲೂಕಿನ ಸಹಕಾರಿಗಳ ಸಹಯೋಗದಲ್ಲಿ ವೀರಶೈವ ವಿದ್ಯಾವರ್ಧಕ ಸಂಘದ ಎಸ್.ಕೆ. ಬಿ.ಎಡ್. ಕಾಲೇಜಿನಲ್ಲಿ ಸಹಕಾರ ಜಾಗೃತಿ ಸಭೆ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಜಯ ಪಾಟೀಲ, ಸಹಕಾರ ಕ್ಷೇತ್ರ ನಡೆದು ಬಂದ ಐತಿಹಾಸಿಕ ಪಯಣವನ್ನು ವಿವರಿಸಿದರು. ಕೇಂದ್ರ ಸರ್ಕಾರ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದ ನಂತರ ದೇಶದ ಸಹಕಾರ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು ನಡೆದಿದ್ದು, ರೈತರು, ಮಹಿಳೆಯರು, ಯುವಕರು ಹಾಗೂ ಗ್ರಾಮೀಣ ಜನರ ಆರ್ಥಿಕ ಸಬಲೀಕರಣಕ್ಕೆ ಹೊಸ ಅವಕಾಶಗಳು ದೊರೆತಿವೆ ಎಂದರು.

ಸಹಕಾರ ಸಂಘಗಳು ಗ್ರಾಮೀಣ ಅಭಿವೃದ್ಧಿಯ ಪ್ರಮುಖ ಶಕ್ತಿಯಾಗಿದ್ದು, ದೇಶದ ಆರ್ಥಿಕ ಬೆಳವಣಿಗೆಗೆ ಮಹತ್ತರ ಕೊಡುಗೆ ನೀಡುತ್ತಿವೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ವಿ.ಸಿ. ಹಿರೇಮಠ ಉದ್ಘಾಟಿಸಿ, ವಿದ್ಯಾರ್ಥಿಗಳು ಸಹಕಾರ ಕ್ಷೇತ್ರದ ತತ್ವಗಳು ಮತ್ತು ಮೌಲ್ಯಗಳನ್ನು ಅರಿತು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಉಪಾಧ್ಯಕ್ಷ ಚಂದ್ರಶೇಖರ ಕವಟಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಹಕಾರ ಚಳವಳಿಯ ಉದ್ದೇಶ, ಸಚಿವಾಲಯದ ಸಾಧನೆಗಳು ಹಾಗೂ ಸಮಾಜದಲ್ಲಿ ಸಹಕಾರ ಸಂಘಗಳ ಮಹತ್ವವನ್ನು ವಿವರಿಸಿದರು.

ಸಭೆಯಲ್ಲಿ ಒಕ್ಕೂಟದ ನಿರ್ದೇಶಕರಾದ ಸಿದ್ಧು ಮಲ್ಲಿಕಾರ್ಜುನ ಮಠ, ಯಮನಪ್ಪ ಸಾತಿಹಾಳ, ಅರುಣ ಆರ್. ವಾರದ, ವಿವೇಕಾನಂದ ಶಿರೋಳಕರ ಹಾಗೂ ಮುಖ್ಯ ಕಾರ್ಯನಿರ್ವಾಹಕ ಪಂಪನಗೌಡ ಪಾಟೀಲ ಉಪಸ್ಥಿತರಿದ್ದರು.

ಬಿಎಡ್. ಕಾಲೇಜಿನ ವಿದ್ಯಾರ್ಥಿಗಳಿಗಾಗಿ ವಿಶೇಷವಾಗಿ ಆಯೋಜಿಸಿದ್ದ ಸಹಕಾರ ಜಾಗೃತಿ ಸಭೆಯಲ್ಲಿ ಸಹಕಾರಿಗಳಾದ ಕಾಶಿನಾಥ ಮುರಾಳ, ಕಿಶನ್ ಲೋಖರೆ, ವಾಸುದೇವ ಹೆಬಸೂರ, ಸಂಜು ಹಂಚಾಟೆ, ಶಂಕರಗೌಡ ಪಾಟೀಲ, ದ್ಯಾಮನಗೌಡ ಪಾಟೀಲ ಮಿಣಜಗಿ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ಬಾಬುಸಿಂಗ್ ಹಜೇರಿ ಹಟ್ಟಿ, ವೀರಶೈವ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯರು, ತಾಲ್ಲೂಕಿನ ವಿವಿಧ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಕರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ಸಹಕಾರ ಸಚಿವಾಲಯದ ಐದು ವರ್ಷದ ಸಾಧನೆಗಳು ಹಾಗೂ ಸಹಕಾರದಿಂದ ಸಮೃದ್ಧಿ ಎಂಬ ಪರಿಕಲ್ಪನೆಯನ್ನು ಯುವಜನರಲ್ಲಿ ಬಿತ್ತರಿಸುವ ಉದ್ದೇಶದಿಂದ ಆಯೋಜಿಸಲಾದ ಈ ಜಾಗೃತಿ ಸಭೆ ಯಶಸ್ವಿಯಾಗಿ ನಡೆಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande